ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಂದಿನ ತಂತ್ರಜ್ಞಾನ ಯುಗದಲ್ಲಿ ಶೈಕ್ಷಣಿಕ ಸಂಸ್ಥೆಗಳಿಗೆ ತಮ್ಮದೇ ಆದ ವೆಬ್‌ಸೈಟ್‌ನ ಅಗತ್ಯತೆ ಇದ್ದು ಇದರಿಂದ ಶೈಕ್ಷಣಿಕ ಸಂಸ್ಥೆಗೆ, ವಿದ್ಯಾರ್ಥಿಗಳಿಗೆ ರಕ್ಷಕರಿಗೆ ಹಾಗೂ ಸಾರ್ವಜನಿಕರಿಗೆ ಪ್ರಯೋಜನವಾಗಲಿದೆ ಎಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಆರ್.ಬಿ.ನಾಯಕ್ ರವರು ಸ್ಥಳೀಯ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಕಾಲೇಜಿನ ವೆಬ್ ಸೈಟ್ ಉದ್ಘಾಟಿಸಿ ಮಾತನಾಡಿದರು
ಇನ್ನೋರ್ವ ಮುಖ್ಯ ಅತಿಥಿ ಮಂಗಳೂರಿನ ಎ.ಜೆ. ಮೆಡಿಕಲ್ ಕಾಲೇಜಿನ ಖ್ಯಾತ ಮಕ್ಕಳ ತಜ್ಞ ಹಾಗೂ ೨೦೧೭ನೇ ಸಾಲಿಗೆ ಇಂಡಿಯನ್ ಪಿಡಿಯಾಟ್ರಿಕ್ಸ್ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ಸಂತೋಷ ಟಿ ಸೋನ್ಸ್ ರವರು ಮಾತನಾಡುತ್ತಾ ಇಂದು ದೇಶದ ಮೂಲೆ ಮೂಲೆಗಳಲ್ಲಿ ಶೈಕ್ಷಣಿಕ ಸಂಸ್ಥೆಗಳು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿರುವ ಯುವಕ ಯುವತಿಯರು ತಮ್ಮ ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ತಮ್ಮ ಬುದ್ಧಿವಂತಿಕೆಯನ್ನು ಪ್ರದರ್ಶಿಸಿ ತಮ್ಮ ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು. ಕುಂದಾಪುರದವರು ಛಲಗಾರರು, ಬುದ್ಧಿವಂತರು, ಪ್ರಪಂಚದ ಬೇರೆ ಬೇರೆ ಕಡೆಗಳಲ್ಲಿ ನೆಲಸಿ ತಮ್ಮ ಛಾಪನ್ನು ಮೂಡಿಸಿದ್ದಾರೆಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ.ಎಂ ಸುಕುಮಾರ ಶೆಟ್ಟಿ ಮಾತನಾಡುತ್ತಾ ಸಮಾಜದ ಎಳಿಗೆಯ ನೆಲೆಯಲ್ಲಿ ನಮ್ಮ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದ್ದು ಪ್ರತಿಯೊಬ್ಬ ವಿದ್ಯಾರ್ಥಿ ಜವಬ್ದಾರಿಯುತವಾಗಿ ತಮ್ಮ ತಮ್ಮ ಕರ್ತವ್ಯಗಳನ್ನು ನಿಭಾಯಿಸಬೇಕು. ಸಂಸ್ಥೆಯ ಆಡಳಿತಮಂಡಳಿ ವಿದ್ಯಾರ್ಥಿಗಳಿಗೆ ಬೇಕಾಗುವ ಎಲ್ಲಾ ವ್ಯವಸ್ಥೆಯನ್ನು ಮಾಡಲು ಸಿದ್ಧವಾಗಿದೆ. ಈ ಸಂಸ್ಥೆಯ ಕೀರ್ತಿ ಇನ್ನಷ್ಟು ಎತ್ತರಕ್ಕೆ ಎರುವಲ್ಲಿ ನೀವೆಲ್ಲರೂ ಕೈಜೋಡಿಸಬೇಕೆಂದರು.
ಸಂಸ್ಥೆಯ ಉಪಾಧ್ಯಕ್ಷ ಪೋ. ಎ.ಪಿ ಮಿತ್ತಂತ್ತಾಯ ಸ್ವಾಗತ ಮಾಡಿದರು. ಪ್ರಾಂಶುಪಾಲರಾದ ನವೀನ್ ಕುಮಾರ್ ಶೆಟ್ಟಿ ಕಾಲೇಜಿನ ವರದಿಯನ್ನು ಮಂಡಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ವನಿತಾ ಆಳ್ವ ವಂದಿಸಿದರು. ಕಾರ್ಯಕ್ರಮದಲಿ ಆರ್.ಬಿ.ನಾಯಕ್ ಹಾಗೂ ಡಾ. ಸಂತೋಷ ಸೋನ್ಸ್ ದಂಪತಿಯನ್ನು ಸನ್ಮಾನಿಸಲಾಯಿತು. ಉಪನ್ಯಾಸಕಿಯರಾದ ಜಯಶೀಲಾ ಪೈ ಹಾಗೂ ಲೋನಾ ಲುವಿಸ್ ರವರು ಅತಿಥಿಗಳನ್ನು ಪರಿಚಯಸಿ ಸನ್ಮಾನ ಪತ್ರ ವಾಚಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಸೋಲಮನ್ ಸೋನ್ಸ್ ,ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಜೊತೆ ಕಾರ್ಯದಶಿ ಸುಧಾಕರ ಶೆಟ್ಟಿ ಬಾಂಡ್ಯ, ಸದಸ್ಯರಾದ ಡಾ.ಎಂ.ವಿ ಕುಲಾಲ , ಡಾ.ವೈ.ಎಸ್ ಹೆಗ್ಡೆ, ಕಾಲೇಜು ವಿದ್ಯಾರ್ಥಿ ನಾಯಕ ಸುಮಂತ್ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಫಾತಿಮಾ ನೂಹ ಹಾಗೂ ಅಮೃತ ಜೆ ಶೆಟ್ಟಿಯವರು ಕಾರ್ಯಕ್ರಮ ನಿರ್ವಹಿಸಿದರು.ಬಹುಮಾನವನ್ನು ಸರಿತಾ ಸೋನ್ಸ್ ರವರು ವಿತರಿಸಿದರು. ಅನುಷಾ ಉಡುಪ, ಅಶ್ವಾನ್ , ನೀತಿ ಶೆಟ್ಟಿ , ವೈಭವಿ ಹಾಗೂ ದೈಹಿಕ ಶಿಕ್ಷಕರಾದ ಪ್ರದೀಪ ಶೆಟ್ಟಿಯವರು ಬಹುಮಾನಿತರ ಪಟ್ಟಿ ವಾಚಿಸಿದರು. ನಂತರ ಸಾಂಸ್ಮ್ಕತಿಕ ಕಾರ್ಯಕ್ರಮಗಳು ಜರಗಿದವು.