Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಖಾರ್ವಿಕೇರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ವಿದ್ಯಾರ್ಥಿಗಳು ಸೋಲಿಗೆ ಕುಗ್ಗದೆ, ಗೆಲುವಿಗೆ ಹಿಗ್ಗದೆ ಕ್ರೀಡಾ ಮನೋಭಾವನೆಯಿಂದ ಕ್ರೀಡೆಗಳಲ್ಲಿ ಭಾಗವಹಿಸಿ ಕ್ರೀಡಾ ಸ್ಫೂರ್ತಿ ಪ್ರದರ್ಶಿಸಬೇಕು. ನಿರಂತರವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಆಗುವುದರಿಂದ ಮಕ್ಕಳಿಗೆ ಕ್ರೀಡಾ ಚಟುವಟಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಗಂಗೊಳ್ಳಿಯ ಸಮಾಜಸೇವಕ ಜಿ.ಗಣಪತಿ ಶಿಪಾ ಹೇಳಿದರು.

ಅವರು ನಡೆದ ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಶಾಲೆಯ ಮುಖ್ಯಶಿಕ್ಷಕಿ ಸುಜಾತಾ ಕೆ., ಸ್ಥಳದಾನಿಗಳಾದ ಮೋಹನದಾಸ ಕಾನೋಜಿ, ಜ್ಞಾನದಾಸ ಕಾನೋಜಿ, ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ನಾಗರಾಜ ಖಾರ್ವಿ, ಸದಸ್ಯರಾದ ರವಿಶಂಕರ ಖಾರ್ವಿ, ಶ್ರೀಧರ ಮೊಗವೀರ, ಪವಿತ್ರ ಮೇಸ್ತ, ಶಾರದಾ, ಮಮತಾ, ದಿವಾಕರ ಖಾರ್ವಿ, ರಾಮ ಖಾರ್ವಿ, ಸುಧಾಕರ ಖಾರ್ವಿ, ವೆಂಕಟೇಶ ಕೋಟಾನ್, ಇಂದಿರಾ, ರೇಣುಕಾ, ಮಾನಸ, ಶಾಲೆಯ ಸಹಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.

Exit mobile version