Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಎಸ್.ವಿ.ಶಾಲೆಗಳ ಪ್ರಾಕ್ತನ ವಿದ್ಯಾರ್ಥಿ ಸಂಘದ 47ನೇ ವಾರ್ಷಿಕೋತ್ಸವ

????????????????????????????????????

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಜೀವನದಲ್ಲಿ ವಿದ್ಯಯೇ ಮುಖ್ಯವಲ್ಲ. ವಿದ್ಯೆಯ ಜೊತೆಗೆ ಸಾಮಾನ್ಯಜ್ಞಾನ ಅತ್ಯಗತ್ಯ. ವಿದ್ಯಾರ್ಥಿಗಳು ಶಿಕ್ಷಣ ಮುಗಿಸಿದ ಬಳಿಕ ಅಗತ್ಯ ತರಬೇತಿ ಪಡೆದುಕೊಂಡಾಗ ತಮ್ಮ ವೃತ್ತಿ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿದೆ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ ಸಾಧನೆಗೈದು ಉನ್ನತ ಸ್ಥಾನ ಅಲಂಕರಿಸಿದಾಗ ತಮಗೆ ಶಿಕ್ಷಣ ನೀಡಿದ ಶಾಲೆ ಹಾಗೂ ಅಧ್ಯಾಪಕರನ್ನು ಎಂದಿಗೂ ಮರೆಯಬಾರದು. ಶಾಲೆಯ ಅಭಿವೃದ್ಧಿಗೆ ತಮ್ಮಿಂದಾಗುವ ಸಹಾಯ ಮಾಡುವಂತಾಗಬೇಕು ಎಂದು ಬಳ್ಳಾರಿಯ ಉದ್ಯಮಿ ಪದ್ಮನಾಭ ಕೊತ್ವಾಲ್ ಹೇಳಿದರು.

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಜರಗಿದ ಎಸ್.ವಿ.ಶಾಲೆಗಳ ಪ್ರಾಕ್ತನ ವಿದ್ಯಾರ್ಥಿ ಸಂಘದ ೪೭ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಪೂಜಾರಿ, ಗಂಗೊಳ್ಳಿಯ ಜಿಎಸ್‌ವಿಎಸ್ ಅಸೋಸಿಯೇಶನ್‌ನ ಅಧ್ಯಕ್ಷ ಡಾ.ಕಾಶೀನಾಥ ಪೈ, ಗಂಗೊಳ್ಳಿಯ ಉದ್ಯಮಿ ಜಿ.ರಾಧಾಕೃಷ್ಣ ನಾಯಕ್ ಶುಭ ಹಾರೈಸಿದರು. ಗಂಗೊಳ್ಳಿ ಹಸಿಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಜಿ.ಟಿ.ಮಂಜುನಾಥ ಅವರು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಿದರು. ಇದೇ ಸಂದರ್ಭ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಆರ್.ಎನ್.ರೇವಣಕರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗುಜ್ಜಾಡಿ ನರಸಿಂಹ ನಾಯಕ್ ಸ್ಮರಣಾರ್ಥ ಜಿ.ರಾಧಾಕೃಷ್ಣ ನಾಯಕ್ ಅವರು ಸಂಘದ ಮೂಲಕ ನೂತನವಾಗಿ ನಿರ್ಮಿಸಿದ ಧ್ವಜಸ್ತಂಭವನ್ನು ಶಾಲೆಗೆ ಹಸ್ತಾಂತರಿಸಲಾಯಿತು.

ಸಂಘದ ಅಧ್ಯಕ್ಷ ಸತೀಶ ಜಿ. ಸ್ವಾಗತಿಸಿದರು. ಕಾರ್ಯದರ್ಶಿ ಬಿ.ಪ್ರಕಾಶ ಶೆಣೈ ವರದಿ ವಾಚಿಸಿದರು. ಮಹಮ್ಮದ್ ಹುಸೇನ್ ಸಂದೇಶ ವಾಚಿಸಿದರು. ಜಿ.ವಿಠಲ ಶೆಣೈ ಅವರು ಸನ್ಮಾನಿತರನ್ನು ಮತ್ತು ಅರುಣ್ ಕುಮಾರ್ ಅತಿಥಿಗಳನ್ನು ಪರಿಚಯಿಸಿದರು. ಖಜಾಂಚಿ ಜಿ.ಸುದನೇಶ ಶ್ಯಾನುಭಾಗ್ ಸನ್ಮಾನಿತರ ಪಟ್ಟಿ ವಾಚಿಸಿದರು. ಶೇಖರ್ ಜಿ. ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಬಿ.ರಾಘವೇಂದ್ರ ಪೈ ವಂದಿಸಿದರು.

Exit mobile version