Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ತಾಲೂಕಿನ ಚರ್ಚ್‌, ಕ್ರೈಸ್ತ ಸಮುದಾಯದಲ್ಲಿ ಕ್ರಿಸ್ಮಸ್ ಸಂಭ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ/ಬೈಂದೂರು: ಹೋಲಿಕ್ರಾಸ್ ಚರ್ಚ್‌ನಲ್ಲಿ ಯೇಸುವಿನ ಜನ್ಮದಿನ ಕ್ರಿಸ್ಮಸ್ ಆಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ತಾಲೂಕಿನ ಕುಂದಾಪುರ ಹೊಲಿಕ್ರಾಸ್ ಚರ್ಚ್, ಬಸ್ರೂರು ಫಿಲೀಪ್ ನೇರಿ ಚರ್ಚ್, ತ್ರಾಸಿ ಕ್ರಿಸ್ಟ್‌ಕಿಂಗ್ ಚರ್ಚ್, ಗಂಗೊಳ್ಳಿ ಅವರ್ ಲೇಡಿ ಆಫ್ ಇಮ್ಯಾಕ್ಯೂಲೇಟ್ ಚರ್ಚ್, ತಲ್ಲೂರು, ಬೆಳ್ವೆ ಜೊಸೆಫ್ ಚರ್ಚ್, ಫ್ರಾನ್ಸಿಸ್ ಆಸಿಸಿ ಚರ್ಚ್, ಬೈಂದೂರು ಹೊಲಿಕ್ರಾಸ್ ಚರ್ಚ್‌ಗಳಲ್ಲಿ ಹಾಗೂ ಕ್ರೈಸ್ತ ಸಮುದಾಯದಲ್ಲಿ ಕ್ರಿಸ್ಮಸ್ ಸಂಭ್ರಮ ಮನೆಮಾಡಿದೆ.

ಚರ್ಚ್‌ಗಳಿಗೆ ಕುಟುಂಬ ಸಮೇತ ತೆರಳಿದ ಕ್ರೈಸ್ತರು, ಯೇಸು ಕ್ರಿಸ್ತನ ಶೀಲುಬೆ ಮುಂದೆ ನಿಂತು ಶ್ರದ್ದಾ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು. ಚರ್ಚ್‌ನ ಆವರಣದಲ್ಲಿ ನಿರ್ಮಿಸಿರುವ ಕಣ್ಮನ ಸೆಳೆಯುವ ಗೋದಲಿಗಳು ವಿದ್ಯುತ್ ದೀಪಾಲಂಕಾರ ಗಮನ ಸೆಳೆಯುತ್ತಿದ್ದವು. ಕ್ರೈಸ್ತರ ಮನೆಗಳಲ್ಲಿ ಸಂಭ್ರಮ ಮನೆಮಾಡಿದ್ದು, ಗೋದಲಿ, ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ.

Exit mobile version