Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ನಿಂತಿದ್ದ ಕಾರಿಗೆ ಎದುರಿನಿಂದ ಬಂದ ಕಾರು ಢಿಕ್ಕಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಬೈಂದೂರು-ವಿರಾಜಪೇಟೆ ರಾಜ್ಯ ಹೆದ್ದಾರಿಯಲ್ಲಿ ಮಯ್ಯಾಡಿ ಸೊಸೈಟಿ ಸಮೀಪ ರಸ್ತೆಯ ಬದಿಯಲ್ಲಿ ನಿಂತಿದ್ದ ಸ್ವಿಫ್ಟ್ ಕಾರಿಗೆ ಎದುರಿನಿಂದ ಬಂದ ಸ್ವಿಫ್ಟ್ ಕಾರೊಂದು ಢಿಕ್ಕಿಯಾದ ಘಟನೆ ವರದಿಯಾಗಿದ್ದು, ಚಲಿಸುತ್ತಿದ್ದ ಕಾರಿನಲ್ಲಿದ್ದ ಮಹಿಳೆಯೋರ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಕೊಲ್ಲೂರಿನಲ್ಲಿ ಬೈಂದೂರು ಕಡೆಗೆ ಸಂಚರಿಸುತ್ತಿದ್ದ ಬೆಂಗಳೂರು ನೊಂದಣಿ ಹೊಂದಿರುವ ಸ್ವಿಫ್ಟ್ ಕಾರು ಮಯ್ಯಾಡಿಯ ಸೊಸೈಟಿಯ ಬಳಿ ರಸ್ತೆಯ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಸ್ವಿಫ್ಟ್ ಕಾರಿಗೆ ಢಿಕ್ಕಿ ಹೊಡೆದಿತ್ತು. ಢಿಕ್ಕಿಯ ರಭಸಕ್ಕೆ ಎರಡೂ ಕಾರಿನ ಎಡಭಾಗ ಸಂಪೂರ್ಣ ಜಖಂಗೊಂಡಿದೆ. ಚಲಿಸುತ್ತಿದ್ದ ಕಾರಿನಲ್ಲಿದ್ದ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳೀಯರು ಸುಗಮ ಸಂಚಾರಕ್ಕೆ ಅನುವುಮಾಡಿಕೊಟ್ಟರು. ಬೈಂದೂರು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Exit mobile version