Kundapra.com ಕುಂದಾಪ್ರ ಡಾಟ್ ಕಾಂ

ಕಂಚಿಕಾನ್: ಹಳೆವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಯಾವುದೇ ಸಂಸ್ಥೆಯನ್ನು ಆರಂಭಿಸುವ ಸ್ಥಾಪಕ ವ್ಯಕ್ತಿಯ ತ್ಯಾಗ, ಪರಿಶ್ರಮ ಹಾಗೂ ನಿಷ್ಠೆಯಿಂದ ಕೂಡಿದ ಪ್ರಾಮಾಣಿಕ ಸೇವೆಯಿಂದ ಮಾತ್ರ ಅದು ಅಭಿವೃದ್ಧಿ ಕಾಣಲು ಸಾಧ್ಯ. ಆತನ ದೂರದೃಷ್ಠಿತ್ವದ ಚಿಂತನೆಯನ್ನು ಸಮಾನ ಮನಸ್ಕ ಸಹಚರರು ಆತನನ್ನು ಹಿಂಬಲಿಸುತ್ತಾರೆ. ಈ ವ್ಯವಸ್ಥೆಯಿಂದ ಸಂಸ್ಥೆ ಬೆಳೆಯಲು ಸಹಕಾರಿಯಾಗುತ್ತದೆ ಎಂದು ಮಹಾಬಲೇಶ್ವರದ ವೇದಮೂರ್ತಿ ಪ್ರಕಾಶ ಉಡುಪ ಹೇಳಿದರು.

ಕಂಚಿಕಾನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾರದಾ ರಂಗಮಂದಿರದಲ್ಲಿ ನಡೆದ ಶಾಲೆಯ ಹಳೆವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಸಂಸ್ಥೆ ಪರಿಣಾಮಕಾರಿಯಾಗಿ ಹೊಣೆ ನಿರ್ವಹಿಸಲು ಕರ್ತವ್ಯಶೀಲ ಶಿಕ್ಷಕರ, ಪ್ರೋತ್ಸಾಹಕ ಪಾಲಕರ, ಹಳೆವಿದ್ಯಾರ್ಥಿಗಳ, ಹೊಣೆಗಾರರಾದ ಜನಪ್ರತಿನಿಧಿಗಳ ಮತ್ತು ಶಿಕ್ಷಣ ಪ್ರೇಮಿ ಸಾರ್ವಜನಿಕರ ಬೆಂಬಲ ಬೇಕು ಎಂದರು.

ಅಧ್ಯಕ್ಷತೆವಹಿಸಿದ್ದ ಶಾಸಕ ಕೆ. ಗೋಪಾಲ ಪೂಜಾರಿ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಐವರನ್ನು ಸನ್ಮಾನಿಸಿದರು. ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಹಳೆವಿದ್ಯಾರ್ಥಿಗಳಿಗೆ ನಡೆಸಿದ ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಲಾಯಿತು. ಗ್ರಾಮದ ಎಲ್ಲಾ ಅಂಗನವಾಡಿಗಳಿಗೆ ಪ್ರಶಸ್ತಿಪತ್ರ ವಿತರಿಸಲಾಯಿತು.

ಗ್ರಾಪಂ ಅಧ್ಯಕ್ಷೆ ಲೋಲಾಕ್ಷಿ ದೇವಾಡಿಗ, ಕ್ಷೇತ್ರ ಸಮನ್ವಯ ಅಧಿಕಾರಿ ಅಬ್ದುಲ್ ರವೂಫ್, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಬಿ. ರಘುರಾಮ ಶೆಟ್ಟಿ, ಉದ್ಯಮಿಗಳದ ರಾಮದಾಸ ಎಸ್. ಕಿಣಿ, ಜಿ. ಗೋಕುಲ್ ಶೆಟ್ಟಿ, ಗ್ರಾಪಂ ಮಾಜಿ ಸದಸ್ಯರಾದ ನಾರಾಯಣ ದೇವಾಡಿಗ, ಕೃಷ್ಣ ದೇವಾಡಿಗ, ಮುಖ್ಯಶಿಕ್ಷಕ ಮಹಾಬಲೇಶ್ವರ ಐತಾಳ್, ಧಗ್ರಾಯೋ ಬಿಜೂರು ಬಿ ಒಕ್ಕೂಟದ ಅಧ್ಯಕ್ಷೆ ಮೂಕಾಂಬಿಕಾ, ಅಂಜನ್ ಕುಮಾರ್, ಉಪಸ್ಥಿತರಿದ್ದರು. ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ. ರವೀಂದ್ರ ಕಿಣಿ ಸ್ವಾಗತಿಸಿ, ಚಿತ್ತರಂಜನ್ ವಂದಿಸಿದರು. ವಿಶ್ವನಾಥ ಆಚಾರ್ಯ ನಿರೂಪಿಸಿದರು.

Exit mobile version