Kundapra.com ಕುಂದಾಪ್ರ ಡಾಟ್ ಕಾಂ

ರಾಜ್ಯ ಮಟ್ಟದ ಜನಪದ ಗಾಯನ ಸ್ವರ್ಧೆ: ಮೇಘನಾ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಪದವಿಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು ಹಾಗೂ ಎಸ್. ಎಸ್. ಪದವಿಪೂರ್ವ ಕಾಲೇಜು, ವಿಜಯಪುರ ಜಂಟಿ ಆಶ್ರಯದಲ್ಲಿ ವಿಜಯಪುರದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆ ಜನಪದ ಗಾಯನ ವಿಭಾಗದಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಘನಾ ಎ. ಅವರು ಪ್ರಥಮ ಸ್ಥಾನಗಳಿಸಿದ್ದಾರೆ. ವಿಜೇತ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ ಮತ್ತು ಪ್ರಾಧ್ಯಾಪಕ ವೃಂದ ಅಭಿನಂದಿಸಿರುತ್ತಾರೆ. ಮೇಘನಾ ಶಿಕ್ಷಕರಾದ ರಾಮದಾಸ್ ಮತ್ತು ಸುಮನಾ ದಂಪತಿಯವರ ಪುತಿಯಾಗಿರುತ್ತಾರೆ.

Exit mobile version