ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಬೈಂದೂರು ವಲಯದ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಂಗಳೂರಿನ ಕೊಂಚಾಡಿ ರಾಧಾ ಗೋಪಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊಡುಗೆಯಾಗಿ ನೀಡಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಗಂಗೊಳ್ಳಿಯ ಉದ್ಯಮಿ ಎಚ್.ಗಣೇಶ ಕಾಮತ್ ಉದ್ಘಾಟಿಸಿದರು.
ಕುಂದಾಪುರ ಉದ್ಯಮಿ ಸುಭಾಶ್ ಭಂಡಾರಿ, ಗುಜ್ಜಾಡಿ ಗ್ರಾಪಂ ಅಧ್ಯಕ್ಷ ಹರೀಶ ಮೇಸ್ತ, ಗ್ರಾಮ ಪಂಚಾಯತ್ ಸದಸ್ಯರಾದ ಕಾವ್ಯ ಶೇರುಗಾರ್, ವೇದಾವತಿ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರಾಮನಾಥ ಚಿತ್ತಾಲ್, ಪತ್ರಕರ್ತ ಬಿ.ರಾಘವೇಂದ್ರ ಪೈ, ನಿವೃತ್ತ ಮುಖ್ಯೋಪಾಧ್ಯಾಯ ಹನುಮಂತ ಬಿಲ್ಲವ, ಎಸ್‌ಡಿಎಂಸಿ ಉಪಾಧ್ಯಕ್ಷೆ ಇಂದಿರಾ, ಶಾಲಾ ವಿದ್ಯಾರ್ಥಿ ನಾಯಕ ಕೀರ್ತಿರಾಜ್, ಪ್ರಭಾರ ಮುಖ್ಯಶಿಕ್ಷಕ ಜಯರಾಮ ಶೆಟ್ಟಿ, ಎಸ್‌ಡಿಎಂಸಿ ಸದಸ್ಯರು, ಶಾಲೆಯ ಸಹಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.