Kundapra.com ಕುಂದಾಪ್ರ ಡಾಟ್ ಕಾಂ

ಭಂಡಾರ್‌ಕಾರ್ಸ್ ಕಾಲೇಜು ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ೨೦೧೬-೨೦೧೭ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವು ಹುಣ್ಸೆಮಕ್ಕಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು.

ಶ್ರೀ ಕ್ಷೇತ್ರ ಕೋಲ್ಲೂರು ಇದರ ಮಾಜಿ ಧರ್ಮದರ್ಶಿಗಳಾದ ಎನ್. ಮಂಜಯ್ಯ ಶೆಟ್ಟಿ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಕೇವಲ ನಾಲ್ಕು ಗೋಡೆಗಳ ಮಧ್ಯೆ ಔಪಚಾರಿಕ ಶಿಕ್ಷಣವನ್ನಲ್ಲದೆ , ಸಮಾಜದಲ್ಲಿನ ವಿವಿಧ ವಿಷಯಗಳನ್ನು ಸಕಾರಾತ್ಮಕವಾಗಿ ತೆಗೆದುಕೊಂಡು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಎನ್.ಎಸ್.ಎಸ್ ವಿದ್ಯಾರ್ಥಿಗಳು ಕಾರ್ಯಪ್ರವೃತ್ತರಾಗಲಿ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಪದವಿ ವಿಭಾಗದ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ಎಮ್.ರತ್ನಾಕರ ಶೆಟ್ಟಿ ವಲಯ ಅಧ್ಯಕ್ಷರು, ಲಯನ್ಸ ೩೧೭ಸಿ, ಸೂರಪ್ಪ ಹೆಗ್ಡೆ, ಮುಖ್ಯೋಪಾಧ್ಯಾಯರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹುಣ್ಸೆಮಕ್ಕಿ, ಚಂದ್ರ ಆಚಾರ್ಯ, ಅಧ್ಯಕ್ಷರು, ಪ್ರಗತಿ ಯುವಕ ಮಂಡಲ, ಹುಣ್ಸೆಮಕ್ಕಿ ಉಪಸ್ಥಿತರಿದ್ದರು.

ಭಂಡಾರ್ಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೊಜನಾಧಿಕಾರಿ ರಾಮಚಂದ್ರ ಆಚಾರ್ ಶಿಬಿರದ ಕುರಿತು ಪ್ರಸ್ತಾವಿಕವಾಗಿ ಮಾತನಾಡಿದರು. ಯೊಜನಾಧಿಕಾರಿ ಅರುಣ್ ಕುಮಾರ್ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಮಹಾಲಕ್ಷ್ಮಿ ನಿರೂಪಿಸಿ ಶ್ರೀಲತಾ ವಂದಿಸಿದರು.

 

Exit mobile version