ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ತೆಲಂಗಾಣದಲ್ಲಿ ನಡೆದ ರಾಷ್ಟ್ರಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ಬಹುಮುಖ ಕ್ರೀಡಾ ಪ್ರತಿಭೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಸಿಇಬಿಎ ತರಗತಿಯ ವಿದ್ಯಾರ್ಥಿ ನಾಗೇಂದ್ರ ಮೊಗವೀರ ಅವರನ್ನು ಕಾಲೇಜಿನ ವಾರ್ಷಿಕೋತ್ಸವ ಸಂದರ್ಭದಲ್ಲಿ ಅಭಿನಂದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಯಶ್ರೀ ಆರ್ ಪೈ, ಕುಸುಮ ಆರ್ ಕಿಣಿ, ಡಾ.ಕಿಶೋರ್ ಕುಮಾರ್ ಶೆಟ್ಟಿ, ಡಾ.ಕಾಶೀನಾಥ ಪೈ ,ಎನ್ ಸದಾಶಿವ ನಾಯಕ್, ಕವಿತಾ ಎಮ್ ಸಿ, ಸದಾನಂದ ವೈದ್ಯ ಮೊದಲಾದವರು ಉಪಸ್ಥಿತರಿದ್ದರು.