Site icon Kundapra.com ಕುಂದಾಪ್ರ ಡಾಟ್ ಕಾಂ

ಬಾರಂದಾಡಿ : ರಕ್ತದಾನ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ, ಸುವರ್ಣ ಮಹೋತ್ಸವ ಸಮಿತಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಾರಂದಾಡಿಯ ಜಂಟಿ ಆಶ್ರಯದಲ್ಲಿ ಇಂಡಿಯನ್ ರೆಡ್‌ಕ್ರಾಸ್ ಕುಂದಾಪುರ ಘಟಕದ ಸಹಭಾಗಿತ್ವದಲ್ಲಿ ಬಾರಂದಾಡಿ ಶಾಲೆಯಲ್ಲಿ ರಕ್ತದಾನ ಶಿಬಿರ ನಡೆಯಿತು.

ಶಿಬಿರವನ್ನು ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಉದ್ಘಾಟಿಸಿ ನಾವು ನೀಡುವ ರಕ್ತವು ಒಬ್ಬ ವ್ಯಕ್ತಿಯ ಜೀವವನ್ನು ಉಳಿಸಬಲ್ಲದ್ದಾಗಿದೆ ಅಂತಹ ಶ್ರೇಷ್ಠ ಕಾರ್ಯದಲ್ಲಿ ಭಾಗವಹಿಸುವುದು ಹೆಮ್ಮೆಯ ಸಂಗತಿ ಎಂದರು ಇಂಡಿಯನ್ ರೆಡ್‌ಕ್ರಾಸ್ ಕುಂದಾಪುರ ಘಟಕದ ಛೇರ್‌ಮೆನ್ ಜಯಕರ ಶೆಟ್ಟಿ ಅಧ್ಯಕ್ಷತೆವಹಿಸಿ ರಕ್ತದಾನದ ಮಹತ್ವ ಹಾಗೂ ಕುಂದಾಪುರ ರೆಡ್‌ಕ್ರಾಸ್‌ನ ಸೇವೆಯ ಕುರಿತು ತಿಳಿಸಿದರು. ಮುಖ್ಯ ಅಥಿತಿಯಾಗಿ ಕುಂದಾಪುರ ತಾ. ಪಂ ಸದಸ್ಯೆ ಇಂದಿರಾ ಶೆಟ್ಟಿ, ಯೂತ್ ರೆಡ್‌ಕ್ರಾಸ್ ಸಂಚಾಲಕ ಆವರ್ಸೆ ಮುತ್ತಯ್ಯ ಶೆಟ್ಟಿ, ಶಾಲೆಯ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ, ಹಕ್ಲಾಡಿ ಗ್ರಾ. ಪಂ ಅಧ್ಯಕ್ಷೆ ಮಾಲತಿ ಶೆಟ್ಟಿ, ಸದಸ್ಯ ಕಿಶೋರ್ ಕುಮಾರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹಾದೇವ ಆಚಾರ್ಯ ಬಾರಂದಾಡಿ, ರೋಟರಿ ಸದಸ್ಯರು, ಸುವರ್ಣ ಮಹೋತ್ಸವ ಸಮಿತಿ ಸದಸ್ಯರು, ರೆಡ್‌ಕ್ರಾಸ್ ಸಂಸ್ಥೆ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಧ್ಯಾಯಿನಿ ಶ್ರೀಮತಿ ಅಮಿತಾ ಬಿ. ಸ್ವಾಗತಿಸಿದರು. ಶಿಕ್ಷಕ ಕೇಶವ ಶ್ಯಾನುಭಾಗ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Exit mobile version