Site icon Kundapra.com ಕುಂದಾಪ್ರ ಡಾಟ್ ಕಾಂ

ಕೋಡಿ: ಕಾನೂನು ಸಾಕ್ಷರತಾ ರಥದ ಮೂಲಕ ಕಾನೂನು ಮಾಹಿತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ಕುಂದಾಪುರ ಬಾರ್ ಅಸೋಸಿಯೇಶನ್ (ರಿ.) ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ ಮತ್ತು ಬ್ಯಾರೀಸ್ ಪ್ರೌಢಶಾಲೆ ಮತ್ತು ಪಿ.ಯು.ಕಾಲೇಜು ಕೋಡಿ ಇವರ ಜಂಟಿ ಆಶ್ರಯದಲ್ಲಿ ಕಾನೂನು ಸಾಕ್ಷರತಾ ರಥದ ಮೂಲಕ ಕಾನೂನು ಮಾಹಿತಿ ಕಾರ್ಯಕ್ರಮ ಬ್ಯಾರೀಸ್ ಪ್ರೌಢಶಾಲೆ ಮತ್ತು ಪಿ.ಯು.ಕಾಲೇಜು ಕೋಡಿಯಲ್ಲಿ ನಡೆಯಿತು.

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ, ರಾಜಶೇಖರ ವಿ ಪಾಟೀಲ ಕುಂದಾಪುರ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕುಂದಾಪುರ ಬಾರ್ ಅಸೋಸಿಯೇಶನ್ ಇದರ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕುಂದಾಪುರ ಬಾರ್ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಎಚ್. ರವಿಶ್ಚಂದ್ರ ಶೆಟ್ಟಿ, ಸಹಾಯಕ ಸರಕಾರಿ ಅಭಿಯೋಜಕರಾದ ಸಂದೇಶ ಭಂಡಾರಿ, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಹಾಜಿ ಮಾಸ್ತರ್ ಮೊಹಮ್ಮದ್, ಬ್ಯಾರೀಸ್ ಪಿ.ಯು.ಕಾಲೇಜಿನ ಪ್ರಾಂಶುಪಾಲರಾದ ಡಾ|| ಸಮೀರ್, ಬ್ಯಾರೀಸ್ ಶಿಕ್ಷಕ ತರಬೇತಿ ಸಂಸ್ಥೆ ಪ್ರಾಂಶುಪಾಲರಾದ ಸಿದ್ದಪ್ಪ, ಬ್ಯಾರೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿ ಸೋಜ, ಬ್ಯಾರೀಸ್ ಅನುದಾನಿತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಜಯಂತಿ ಉಪಸ್ಥಿತರಿದ್ದರು.

ನ್ಯಾಯವಾದಿ ಎಚ್. ವಸಂತ ಕುಮಾರ ಶೆಟ್ಟಿ ಕುಂದಾಪುರ, ಇವರು ವಿದ್ಯಾರ್ಥಿಗಳಲ್ಲಿ ’ಕಾನೂನು ಪ್ರಜ್ಞೆ ಮತ್ತು ಮೂಲಭೂತ ಹಕ್ಕುಗಳು’ ಎನ್ನುವ ವಿಷಯದ ಬಗ್ಗೆ ಕಾನೂನು ಮಾಹಿತಿ ನೀಡಿದರು. ಭರತ್ ಕುಮಾರ್ ಸ್ವಾಗತಿಸಿ, ಜಯಶೀಲ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿ, ಶ್ವೇತಾ ವಂದಿಸಿದರು.

Exit mobile version