ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪ್ರಾಥಮಿಕ ಶಿಕ್ಷಣದ ಕುರಿತಾಗಿ ವಿಶೇಷ ಅಧ್ಯಯನ ನಡೆಸಲು ಜರ್ಮನಿಯಿಂದ ಆಗಮಿಸಿದ್ದ ಯೂವಾಗ್ ಮತ್ತು ಪಾವೆಲ್ ಭೇಟಿ ನೀಡಿ ಶಾಲಾ ಶೈಕ್ಷಣಿಕ ಚಟುವಟಿಕೆ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಆ ಬಳಿಕ ಶಾಲಾ ವಿದ್ಯಾರ್ಥಿಗಳು ಅವರೊಂದಿಗೆ ಸಂವಾದ ನಡೆಸಿ ಜರ್ಮನಿಯ ಶಿಕ್ಷಣ ವ್ಯವಸ್ಥೆ, ಅಲ್ಲಿನ ಸಂಸ್ಕೃತಿ, ಆಹಾರ ಪದ್ಧತಿ, ಆಚಾರ-ವಿಚಾರಗಳ ಕುರಿತಾಗಿ ಬಹಳ ಕುತೂಹಲದಿಂದ ಪ್ರಶ್ನಿಸಿ ಅರಿತುಕೊಂಡರು. ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ್ ಜರ್ಮನಿಗರನ್ನು ಸ್ವಾಗತಿಸಿದರು. ಸಹಶಿಕ್ಷಕಿ ವಿಜಯಾ ಆರ್. ವಂದಿಸಿದರು. ಸಹಶಿಕ್ಷಕರಾದ ಜಯಲಕ್ಷ್ಮೀ ಬಿ., ಜಯರಾಮ ಶೆಟ್ಟಿ, ವಿಜಯ ಶೆಟ್ಟಿ, ಗೌರವ ಶಿಕ್ಷಕಿ ಚೈತ್ರಾ ಆರ್., ಪ್ರತಿಮಾ, ಕಿಮ್ ಗ್ನೈಡರ್ ಉಪಸ್ಥಿತರಿದ್ದರು.