Kundapra.com ಕುಂದಾಪ್ರ ಡಾಟ್ ಕಾಂ

ಭಂಡಾರ್‌ಕಾರ್ಸ್ ಕಾಲೇಜು: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಂಡಾರ್‌ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜಿನ ಯೂತ್‌ರೆಡ್‌ಕ್ರಾಸ್, ಎನ್.ಎಸ್.ಎಸ್, ಎನ್.ಸಿ.ಸಿ, ರೇಂಜರ್ಸ್ ಮತ್ತುರೋವರ್ಸ್ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸಂಯುಕ್ತಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಕಾಲೇಜಿನಆರ್.ಎನ್ ಶೆಟ್ಟಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕುಂದಾಪುರ ಚಿನ್ಮಯಿ ಆಸ್ಪತ್ರೆಯ ಮೂಳೆ ಮತ್ತು ಕೀಲು ತಜ್ಞರಾದ ಡಾ. ದಿನೇಶ್‌ಕುಮಾರ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ ಒಂದು ಯೂನಿಟ್ ರಕ್ತದಿಂದ ಮೂರು ಜನರ ಜೀವವನ್ನು ಉಳಿಸಬಹುದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಆಡಳಿತಾಧಿಕಾರಿಗಳಾದ ಡಾ. ಹೆಚ್. ಶಾಂತಾರಾಮ್‌ಇವರು ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಪಿ. ನಾರಾಯಣ ಶೆಟ್ಟಿಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಈ ಸಮಾರಂಭದಲ್ಲಿ ಪದವಿಪೂರ್ವಕಾಲೇಜಿನ ಪ್ರಾಂಶುಪಾಲರಾದ ಜಿ.ಎಂ. ಗೊಂಡ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿಗಳಾದ ಎಸ್. ಜಯಕರ ಶೆಟ್ಟಿ, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯ ಡಾ. ಮನೀಷ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕಾರ್ತಿಕೇಯ ಮಧ್ಯಸ್ಥ, ಡಾ. ಹೆಚ್.ಎಸ್. ಮಲ್ಲಿ, ಕಾಲೇಜಿನ ಎನ್‌ಸಿಸಿ ಅಧಿಕಾರಿ ಅಂಜನ್ ಕುಮಾರ್ ಕಾರ್ಯಕ್ರಮದ ಸಂಯೋಜಕರಾದ ಪ್ರೊ. ಸತ್ಯನಾರಾಯಣ ಉಪಸ್ಥಿತರಿದ್ದರು.

ಶಿಬಿರದಲ್ಲಿ 299 ಯೂನಿಟ್‌ಗಳಷ್ಟು ರಕ್ತವನ್ನು ಸಂಗ್ರಹಿಸಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಕುಂದಾಪುರದ ರಕ್ತನಿಧಿ ಕೇಂದ್ರ ಮತ್ತು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ನೀಡಲಾಯಿತು. ವಿನುತ ಕಾರ್ಯಕ್ರಮ ಸ್ವಾಗತಿಸಿದರು. ಕುಮಾರಿ ಪ್ರಶಾಂತಿ ಕಾರ್ಯಕ್ರಮ ನಿರೂಪಿಸಿದರು. ಕುಮಾರಿ ಸ್ನೇಹಾ ವಂದಿಸಿದರು.

 

Exit mobile version