Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ. ಬಿ. ಹೆಗ್ಡೆ ಕಾಲೇಜು: ಯೋಗ ಮತ್ತು ಆಧ್ಯಾತ್ಮ ಸಂಘದ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾರೀರಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಸ್ಥಿಯಲ್ಲಿಡಲು ಯೋಗ ಸಹಕಾರಿ. ಮಾನವ ತನ್ನನ್ನು ತಾನು ಅರಿತು ಸರಿ-ತಪ್ಪುಗಳನ್ನು ವಿಮರ್ಶಿಸಿ ಕೇವಲ ಸರಿಯಾದ ಮಾರ್ಗವನ್ನು ಅಳವಡಿಸಿಕೊಂಡು ಅಭಿವೃದ್ಧಿ ಹೊಂದುವುದೇ ಆಧ್ಯಾತ್ಮದ ತಳಹದಿ. ದೊರೆತಿರುವ ಸೌಲಭ್ಯವನ್ನು ಉಪಯೋಗಿಸಿಕೊಂಡು ಸ್ಪರ್ಧಾತ್ಮಕ ಜಗತ್ತಿಗೆ ತಯಾರಾಗಿ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಯೋಗ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಕೆ. ಕೃಷ್ಣ ಶರ್ಮಾ ಹೇಳಿದರು.

ಅವರು ಕಾಲೇಜಿನ ‘ಯೋಗ ಮತ್ತು ಆಧ್ಯಾತ್ಮ ಸಂಘ’ವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದೋಮ ಚಂದ್ರಶೇಖರ್‌ರವರು ಅಧ್ಯಕ್ಷತೆಯನ್ನು ವಹಿಸಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ರಾಜೇಶ್ ಶೆಟ್ಟಿ ವಕ್ವಾಡಿ, ವಾಣಿಜ್ಯ ಉಪನ್ಯಾಸಕರಾದ ಹರೀಶ್ ಬಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ದೀಕ್ಷಾ ಸ್ವಾಗತಿಸಿದರು. ಅಭಿನಯ ಅತಿಥಿಗಳನ್ನು ಪರಿಚಯಿಸಿದರು. ಪ್ರಗತಿ ಶೆಟ್ಟಿ ವಂದಿಸಿದರು. ಲೋಕೇಶ್ ಕಾರ್ಯಕ್ರಮ ನಿರೂಪಿಸಿದರು.

Exit mobile version