Kundapra.com ಕುಂದಾಪ್ರ ಡಾಟ್ ಕಾಂ

ಪಂಚಗಂಗಾವಳಿ ಬಳಗದ ೨೩ನೇ ವಾರ್ಷಿಕೋತ್ಸವ, ಜಾಕ್ಸನ್ ಡಿಸೋಜಗೆ ಸನ್ಮಾನ

????????????????????????????????????

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ನಮ್ಮ ದೇಶವು ಬಲಿಷ್ಠ ದೇಶವಾಗಿ ರೂಪುಗೊಳ್ಳಬೇಕಾದರೆ ಯುವ ಜನರ ಪ್ರಯತ್ನ ಅತ್ಯಗತ್ಯ. ಸಂಘ ಸಂಸ್ಥೆಗಳ ಮೂಲಕ ಯುವಕರು ಸಮಾಜಮುಖಿ ಚಟುವಟಿಕೆಗಳನ್ನು ನಡೆಸುವುದರ ಮೂಲಕ ದೇಶದ ಅಭಿವೃದ್ಧಿಗೆ ಮುಂದಾಗಬೇಕು. ಸ್ವಹಿತಕ್ಕಾಗಿ ದುಡಿಯದೇ ಸಮಾಜದ ದೇಶದ ಒಳಿತಿಗಾಗಿ ಎಲ್ಲರೂ ಒಂದಾಗಿ ದುಡಿಯಬೇಕು. ಯುವಜನರ ಇಂತಹ ಕಾರ್ಯಕ್ರಮಗಳು ಇತರರಿಗೆ ಮಾದರಿಯಾಗಬೇಕು. ಕಳೆದ ೨೩ವರ್ಷಗಳಿಂದ ಶೈಕ್ಷಣಿಕ, ಸಾಮಾಜಿಕ ಸಮಾಜಮುಖಿ ಕಾರ್ಯಕ್ರಮ ನಡೆಸುತ್ತಿರುವ ಗಂಗೊಳ್ಳಿಯ ಪಂಚಗಂಗಾವಳಿ ಬಳಗ ಎಲ್ಲರಿಗೂ ಮಾದರಿಯಾಗಿದೆ ಎಂದು ಬೈಂದೂರಿನ ಮಾನವ ಹಕ್ಕು ಜನಜಾಗೃತಿ ಸಮಿತಿ ಅಧ್ಯಕ್ಷ ನವೀನಚಂದ್ರ ಉಪ್ಪುಂದ ಹೇಳಿದರು.

ಅವರು ಗಂಗೊಳ್ಳಿಯ ಶ್ರೀ ಪಂಜುರ್ಲಿ ದೇವಸ್ಥಾನದ ವಠಾರದಲ್ಲಿ ಜರಗಿದ ಗಂಗೊಳ್ಳಿಯ ಪಂಚಗಂಗಾವಳಿ ಬಳಗದ ೨೩ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಿವಾನಂದ ಪೂಜಾರಿ ಹಾಗೂ ಶ್ರೀ ಪಂಜುರ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಜಿ.ಪುರುಷೋತ್ತಮ ಆರ್ಕಾಟಿ ಶುಭಾಶಂಸನೆಗೈದರು. ಹಕ್ಲಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಂಜಿತ್ ಬಹುಮಾನ ವಿತರಿಸಿದರು. ಇದೇ ಸಂದರ್ಭ ಅಂತರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ವಿಜೇತ ಜಾಕ್ಸನ್ ಡಿಸೋಜ ಆನಗಳ್ಳಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಜಿ.ಶ್ರೀನಿವಾಸ ಖಾರ್ವಿ ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ಜಿ.ಎನ್.ಸತೀಶ ಖಾರ್ವಿ ಸ್ವಾಗತಿಸಿದರು. ಸಜಿತ್ ಬಿ. ಸಂದೇಶ ವಾಚಿಸಿದರು. ಶೋಭಾ ಎಸ್.ಆರ್ಕಾಟಿ ಸನ್ಮಾನಿತರನ್ನು ಪರಿಚಯಿಸಿದರು. ಜಿ.ಎಂ.ರಾಘವೇಂದ್ರ ಖಾರ್ವಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಸುಂದರ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು. ಚೇತನ್ ಖಾರ್ವಿ ವಂದಿಸಿದರು.

 

Exit mobile version