ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್-ಕಾಲೇಜು ಮಟ್ಟದ ಪುರುಷರ ಸಾಫ್ಟ್‌ಬಾಲ್ ಪಂದ್ಯಾಟದಲ್ಲಿ ಆತಿಥೇಯ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ತಂಡ ದ್ವಿತೀಯ ಸ್ಥಾನದೊಂದಿಗೆ
ರಜತ ಪದಕವನ್ನು ಪಡೆದುಕೊಂಡಿದೆ.
ವಿಜೇತ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲ ಪ್ರೊ. ದೋಮ ಚಂದ್ರಶೇಖರ್, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ. ಎನ್.ರವರು ಮತ್ತು ವಾಣಿಜ್ಯ ಉಪನ್ಯಾಸಕ ಹರೀಶ್ ಬಿ. ಅಭಿನಂದಿಸಿದರು.