Kundapra.com ಕುಂದಾಪ್ರ ಡಾಟ್ ಕಾಂ

ಪುರುಷರ ನೆಟ್‌ಬಾಲ್ ಪಂದ್ಯಾಟ: ಡಾ. ಬಿ. ಬಿ. ಹೆಗ್ಡೆ ಕಾಲೇಜಿಗೆ ತೃತೀಯ ಸ್ಥಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ಧವಳ ಕಾಲೇಜು, ಮೂಡುಬಿದರೆಯ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯ ಅಂತರ್-ಕಾಲೇಜು ಮಟ್ಟದ ಪುರುಷರ ನೆಟ್‌ಬಾಲ್ ಪಂದ್ಯಾಟದಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕವನ್ನು ಪಡೆದುಕೊಂಡಿದೆ.

ವಿಜೇತ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲ ಪ್ರೊ. ದೋಮ ಚಂದ್ರಶೇಖರ್, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ. ಎನ್.ರವರು ಮತ್ತು ವಾಣಿಜ್ಯ ಉಪನ್ಯಾಸಕ ಹರೀಶ್ ಬಿ. ಅಭಿನಂದಿಸಿದರು.

Exit mobile version