ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅನೇಕ ಸಮಸ್ಯೆ, ಗೊಂದಲ, ಒತ್ತಡ ಎದುರಿಸಬೇಕಾಗಿ ಬರಬಹುದು. ತಮ್ಮ ಉಪನ್ಯಾಸಕರ, ಪೋಷಕರ ನೆರವು ಪಡೆದು ಇಂತಹ ಸಂದರ್ಭ ಎದೆಗುಂದದೆ ಎದುರಿಸಬೇಕೆಂದು ಎಚ್.ಎಮ್.ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ
ಮತ್ತು ವಿ.ಕೆ.ಆರ್. ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ಪ್ರಾಂಶುಪಾಲೆ ಚಿಂತನಾ ರಾಜೇಶ್ ಹೇಳಿದರು.
ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಹಾಯ ಘಟಕ ಉದ್ಘಾಟಿಸಿ ಮಾತನಾಡಿದರು. ಕಾಲೇಜ್ ಪ್ರಾಂಶುಪಾಲ ಪ್ರೊ. ದೋಮ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ಸಂಯೋಜಕಿ ನಂದಾ ರೈ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಅಭಿನಯ ಸ್ವಾಗತಿಸಿ, ಪ್ರಗತಿ ಶೆಟ್ಟಿ ಅತಿಥಿಗಳ ಪರಿಚಯಿಸಿದರು, ಚೈತ್ರ ಕಾರ್ಯಕ್ರಮ ನಿರೂಪಿಸಿದರು.