Kundapra.com ಕುಂದಾಪ್ರ ಡಾಟ್ ಕಾಂ

ಸರಸ್ವತಿ ವಿದ್ಯಾಲಯದಲ್ಲಿ ಎನ್ನೆಸ್ಸೆಸ್ ವಾರ್ಷಿಕ ಚಟುವಟಿಕೆ ಸಮಾರೋಪ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಜೀವನದಲ್ಲಿ ಎನ್ನೆಸ್ಸೆಸ್‌ನಲ್ಲಿ ಕಲಿತ ಉತ್ತಮ ವಿಚಾರಗಳನ್ನು ಆಳವಡಿಸಿಕೊಳ್ಳುವ ಪ್ರಯತ್ನ ಮಾಡಬೇಕು.ನಮ್ಮ ಬೆಳವಣಿಗೆಯಿಂದ ಉಳಿದವರು ಸ್ಫೂರ್ತಿ ಪಡೆಯುವಂತಾಗಬೇಕು. ಅದೇ ನಿಜವಾದ ಸಾಧನೆ ಎಂದು ರಸಾಯನ ಶಾಸ್ತ್ರ ಪ್ರಾಧ್ಯಾಪಕ ಆರ್. ಎನ್ ರೇವಣ್ ಕರ್ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಮಾತನಾಡಿ ಎನ್ನೆಸ್ಸೆಸ್ ಬದುಕಿಗೆ ಬೇಕಾದ ವಿಶ್ವಾಸವನ್ನು ಮೂಡಿಸುವಲ್ಲಿ ಸಹಕಾರಿಯಾಗುತ್ತದೆ. ಇಲ್ಲಿ ಕಲಿತ ವಿಚಾರಗಳನ್ನು ಸದಾ ಸ್ಮರಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ನಾರಾಯಣ್ ನಾಯ್ಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿನಿ ಆಶಾ ಸ್ವಾಗತಿಸಿದರು.ರಜತ್ ಅತಿಥಿಗಳನ್ನು ಪರಿಚಯಿಸಿದರು. ಸ್ವಾತಿ ಕಾರ‍್ಯಕ್ರಮ ನಿರೂಪಿಸಿದರು. ನಾಗಲಕ್ಷ್ಮಿ ಧನ್ಯವಾದ ಅರ್ಪಿಸಿದರು.

Exit mobile version