Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿಯ ನೂತನ ಜಿಲ್ಲಾಧಿಕಾರಿಯಾಗಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅಧಿಕಾರ ವಹಿಸಿಕೊಂಡಿದ್ದಾರೆ. ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರಿಗೆ ಜಿಲ್ಲಾಧಿಕಾರಿಯಾಗಿದ್ದ ಟಿ. ವೆಂಕಟೇಶ್ ಅವರು ಅಧಿಕಾರ ಹಸ್ತಾಂತರಿಸಿದ್ದಾರೆ.

2009 ಬ್ಯಾಚ್‌ನ ಐಎಎಸ್ ಅಧಿಕಾರಿ ಆಗಿರುವ ಪ್ರಿಯಾಂಕಾ ಫ್ರಾನ್ಸಿಸ್ ಇಲೆಕ್ಟ್ರಾನಿಕ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದರು. ಚಿಕ್ಕಮಂಗಳೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಅವರು, ಬೆಳಗಾಂ ಜಿಲ್ಲೆಯಾ ಸಹಾಯಕ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದರು. ಬಳಿಕ ಬೆಳಗಾಂ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದರು. 2015 ನವೆಂಬರ್‌ನಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
ಟಿ. ವೆಂಕಟೇಶ್ ಅವರು ಮೈಸೂರು ಶುಗರ್ ಎಂ.ಡಿ ಆಗಿ ವರ್ಗಾವಣೆಗೊಂಡಿದ್ದಾರೆ.

Exit mobile version