Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಶಿಕ್ಷಕ-ರಕ್ಷಕ ಸಂಘದ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜ್ ಶಿಕ್ಷಕ-ರಕ್ಷಕ ಸಂಘದ ಉದ್ಘಾಟನೆ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಸುಬ್ರಹ್ಮಣ್ಯ ಜೋಶಿ ಉದ್ಘಾಟಿಸಿ, ವ್ಯವಹಾರ ಮುಖಿಯಾದ ಜಗತ್ತಿನಲ್ಲಿ ಬದುಕುತ್ತಿರುವ ನಮ್ಮ ಮಕ್ಕಳು ಜ್ಞಾನಮುಖಿಯಾಗಬೇಕು, ಶೈಕ್ಷಣಿಕ ತ್ರಿಕೋಣದ ಮೂರು ಅಂಶಗಳು ವಿದ್ಯಾರ್ಥಿ, ರಕ್ಷಕ ಮತ್ತು ಶಿಕ್ಷಕ. ವಿದ್ಯಾಥಿಗಳು ಶಿಕ್ಷಣ ಸಂಸ್ಥೆಯಲ್ಲಿ ಕಲಿಯುವ ಸಮಯಕ್ಕಿಂತ ಹೆಚ್ಚಿನ ಸಮಯವನ್ನು ರಕ್ಷಕರೊಂದಿಗೆ ಕಳೆಯುತ್ತಿರುವ ಸ್ಥಿತಿಯಲ್ಲಿ ಅವರಲ್ಲಿ ಒಳ್ಳೆಯ ಬುದ್ಧಿ ಮತ್ತು ಸದಾಚಾರಗಳನ್ನು ಬೆಳೆಸಬೇಕು ಎಂದು ಹೇಳಿದರು.

ಕಾಲೇಜಿನ ಸಂಚಾಲಕ ಬಿ. ಎಮ್. ಸುಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ರಾಮಕೃಷ್ಣ ಅಡಿಗ ಉಪಸ್ಥಿತರಿದ್ದರು. ಪ್ರಾಚಾರ್ಯರಾದ ಪ್ರೊ. ದೋಮ ಚಂದ್ರಶೇಖರ್ ಪ್ರಸ್ತಾವಿಕ ಮಾತನಾಡಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಸುಧಾಕರ್ ಪಾರಂಪಳ್ಳಿ ಸ್ವಾಗತಿಸಿದರು. ಕಾಲೇಜ್ ಕನ್ನಡ ವಿಭಾಗ ಮುಖ್ಯಸ್ಥರಾದ ಚೇತನ್ ಶೆಟ್ಟಿ ಕೋವಾಡಿ ನಿರೂಪಿಸಿದರು. ವಾಣಿಜ್ಯ ಉಪನ್ಯಾಸಕರಾದ ಶ್ರೀ ಸತೀಶ್ ಶೆಟ್ಟಿ ಹೆಸ್ಕತ್ತೂರು ವಂದಿಸಿದರು.

Exit mobile version