Kundapra.com ಕುಂದಾಪ್ರ ಡಾಟ್ ಕಾಂ

ಆಧುನಿಕ ತಂತ್ರಜ್ಞಾನ ದುರ್ಬಳಕೆಯಿಂದ ಪ್ರೀತಿ ಭಾಂದವ್ಯ ಮೌಲ್ಯಗಳ ಕುಸಿತ: ಶರಣ ಕುಮಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಆಧುನಿಕ ತಂತ್ರಜ್ಞಾನಗಳ ಫಲವಾಗಿ ವಿಶ್ವದೊಂದಿಗೆ ಸಂಪರ್ಕ ಸಾಧಿಸಲು ಸಾಧ್ಯವಾಗಿದ್ದರೂ ಮನುಷ್ಯ ಮನುಷ್ಯನ ನಡುವಿನ ಪ್ರೀತಿ ಭಾಂದವ್ಯ, ನೈತಿಕ ಮೌಲ್ಯಗಳು ಕುಸಿಯುತ್ತಿದೆ. ಮೊ ಮೊಬೈಲ್, ಟಿವಿಯ ಕಾರಣದಿಂದ ಕಲೆಯ ಆಸ್ವಾದನೆಯಿಂದ ವಿಮುಖರಾಗುತ್ತಿರುವುದೂ ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲ ಶರಣ ಕುಮಾರ್ ಹೇಳಿದರು

ಅವರು ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಸಂಸ್ಥೆಯ ೧೭ನೇ ವರ್ಷದ ಸಂಭ್ರಮದೊಂದಿಗೆ ಆಯೋಜಿಸಿದ ಸುರಭಿ ಜೈಸಿರಿ ಎರಡನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿ ಬದುಕಿನಲ್ಲಿ ಕಲೆ ಒಡನಾಟ ಇಲ್ಲದಿದ್ದರೆ ನಮ್ಮಲ್ಲಿ ಒಳ್ಳೆಯ ಮನೋಭಾವ ಬೆಳೆಯದು. ಕಲೆ ಬದುಕಿನ ಪಾಠವನ್ನು, ಬದುಕುವ ರೀತಿಯನ್ನು ಕಲಿಸಿಕೊಡುತ್ತದೆ ಎಂದರು.

ಚಿತ್ರ ಕಲಾವಿದ ಮಂಜುನಾಥ ಮಯ್ಯ ಉಪ್ಪುಂದ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಭರತನಾಟ್ಯ ಗುರು ವಿದ್ವಾನ್ ಚಂದ್ರಶೇಖರ ನಾವಡ ಸುರತ್ಕಲ್ ಹಾಗೂ ಯಕ್ಷಗಾನ ಗುರು ಪ್ರಶಾಂತ್ ಮಯ್ಯ ದಾರಿಮಕ್ಕಿ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ವಸಂತ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಅಂಜಲಿ ಆಸ್ಪತ್ರೆ ವೈದ್ಯಾಧಿಕಾರಿ ಶೋಭಿತಾ ಭಟ್, ನಿವೃತ್ತ ಬ್ಯಾಂಕ್ ಅಧಿಕಾರಿ ಶ್ರೀಧರ್ ಭಟ್, ಉದ್ಯಮಿ ರಾಮ ಮೇಸ್ತ, ಸಂಸ್ಥೆಯ ನಿರ್ದೇಶಕರಾದ ಕೃಷ್ಣಮೂರ್ತಿ ಉಡುಪ, ಗಣಪತಿ ಹೋಬಳಿದಾರ್ ಉಪಸ್ಥಿತರಿದ್ದರು. ಸುರಭಿಯ ನಿರ್ದೇಶಕ ಸುಧಾಕರ ಪಿ. ಬೈಂದೂರು ಪ್ತಾಸ್ತಾವಿಕ ಮಾತುಗಳನ್ನಾಡಿದರು. ಸುರಭಿ ಬೈಂದೂರು ಅಧ್ಯಕ್ಷ ಶಿವರಾಮ ಕೊಠಾರಿ ಯಡ್ತರೆ, ಸ್ವಾಗತಿಸಿದರು. ಶಿಕ್ಷಕ ರಾಮಕೃಷ್ಣ ದೇವಾಡಿಗ, ಸಂಪ್ರಿತಾ ಕಾರ್ಯಕ್ರಮ ನಿರೂಪಿಸಿದರು.

Exit mobile version