ಮದುವೆ ನಡೆಯಬೇಕಿದ್ದ ಮನೆಯಲ್ಲಿ ಮಸಣ ಮೌನ
ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಷ್ಟ್ರೀಯ ಹೆದ್ದಾರಿ ೬೬ರ ಬಸ್ರೂರು ಮೂರುಕೈ ಬಳಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಯುವಕನಿಗೆ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ವರದಿಯಾಗಿದೆ. ಕಟ್ಕೆರಿ ರಾಜೀವ ಎಂಬುವವರ ಪುತ್ರ ದೀಪಕ್ (26) ಮೃತ ದುರ್ದೈವಿ.
ಕೆಲಸ ನಿಮಿತ್ತ ಕುಂದಾಪುರಕ್ಕೆ ತೆರಳಿದ್ದ ದೀಪಕ್ ಸಂಜೆ ಮನೆಗೆ ಹಿಂದಿರುಗಲು ಬಸ್ರೂರು ಮೂರುಕೈ ಬಳಿ ರಸ್ತೆ ದಾಟುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಮಾಚ್.6ರಂದು ದೀಪಕ್ ಅವರ ಮದುವೆ ನಿಶ್ಚಯವಾಗಿತ್ತು. ಮದುವೆಗೆ ನಾಲ್ಕು ದಿನವಿರುವಾಗಲೇ ಈ ದುಘಟನೆ ನಡೆದಿರುವುದು ಕುಟುಂಬಿಕರಿಗೆ ತೀವ್ರ ಆಘಾತವನ್ನುಂಟುಮಾಡಿದೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.