Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರು ಅಷ್ಟಪವಿತ್ರ ನಾಗಮಂಡಲೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ರಮೇಶ್ ಗಾಣಿಗ ಕೊಲ್ಲೂರು ಹಾಗೂ ನಯನಾ ರಮೇಶ್ ಗಾಣಿಗ ಮತ್ತು ಮಕ್ಕಳು ನಂಬಿರುವ ನಾಗಬನದಲ್ಲಿ ಅಷ್ಟಪವಿತ್ರ ನಾಗಮಂಡಲೋತ್ಸವ ಸಾಂಗವಾಗಿ ನೆರವೇರಿತು. ಮಹಾಅನ್ನಸಂತರ್ಪಣೆ, ಮಂಡಲಸೇವೆ, ಹಾಲಿಟ್ಟು ಸೇವೆ, ಮಂಡಲಪೂಜೆ, ಡಮರು ಸೇವೆಯನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು.

ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕುಂದಾಪುರ ವ್ಯಾಸರಾಜ ಮಠಾಧೀಶ ಶ್ರೀ ಲಕ್ಷ್ಮೀಂದ್ರ ತೀರ್ಥ ಶ್ರೀಪಾಂದಗಳವರು ಆಶೀರ್ವಚನ ನೀಡಿದರು. ಬಳಿಕ ಜರುಗಿದ ಸಮಾರಂಭದಲ್ಲಿ ಧಾರ್ಮಿಕ ಮುಂದಾಳು ಬಿ. ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಅರ್ಚಕ ಡಾ. ಕೆ.ಎನ್. ನರಸಿಂಹ ಅಡಿಗ ಆಶೀರ್ವಚನ ನುಡಿಗಳನ್ನಾಡಿದರು.

ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಎಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯ ಶಂಕರ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯೆ ಗ್ರೀಷ್ಮಾ ಬಿಡೆ, ಕೊಲ್ಲೂರು ಗ್ರಾಪಂ ಅಧ್ಯಕ್ಷ ಎಚ್. ಜಯಪ್ರಕಾಶ್ ಶೆಟ್ಟಿ, ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಎಇಓ ಎಚ್. ಕೃಷ್ಣಮೂರ್ತಿ, ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಅಮರಪ್ರಸಾದ್ ಶೆಟ್ಟಿ, ಕುಂದಾಪುರ ತಾಲೂಕು ಗಾಣಿಗ ಸಮಾಜದ ಅಧ್ಯಕ್ಷ ಶ್ರೀನಿವಾಸ ಗಾಣಿಗ, ಬೆಂಗಳೂರು ಸೋಮಕ್ಷತ್ರೀಯ ಗಾಣಿಗ ಸಮಾಜದ ಅಧ್ಯಕ್ಷ ಎಚ್.ಟಿ ನರಸಿಂಹ, ಬಾರಕೂರು ಸೋಮಕ್ಷತ್ರೀಯ ಗಾಣಿಗ ಸಮಾಜದ ಅಧ್ಯಕ್ಷ ಕೆ. ಗೋಪಾಲ, ಉಪನ್ಯಾಸಕ ಡಾ. ಶ್ರೀಪಾದ್ ಶೆಟ್ಟಿ, ಕುಂದಾಪುರ ಗಾಣಿಗ ಮಹಿಳಾ ಸಂಘದ ಶಶಿಕಲಾ ನಾರಾಯಣ ಗಾಣಿಗ, ಮಮತಾ ಗೋಪಾಲ ಪೂಜಾರಿ, ಶಿವಮೊಗ್ಗ ಗಾಣಿಗ ಸಂಘದ ಅಧ್ಯಕ್ಷ ಎಚ್. ಸುಬ್ಬಯ್ಯ ಉಪಸ್ಥಿತರಿದ್ದರು.

ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪತ್ರಕರ್ತ ಕೆ.ಸಿ. ರಾಜೇಶ್ ಕಾರ್ಯಕ್ರಮ ನಿರೂಪಿಸಿದರು. ರಾತ್ರಿ ಮಂಗಳೂರು ನಂದಗೋಲುಕ ತಂಡದಿಂದ ಶಾಸ್ತ್ರೀಯ, ಲಘು ಶಾಸ್ತ್ರೀಯ, ಜಾನಪದ, ಯಕ್ಷಗಾನ ಹಾಡುಗಳ ವಿಶೇಷ ನಾಟ್ಯ ವೈಭವ ಜರುಗಿತು.

Exit mobile version