Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ. ಬಿ. ಹೆಗ್ಡೆ ಕಾಲೇಜು: ಅಂತರ್ ಕಾಲೇಜು ಮಟ್ಟದ ನೃತ್ಯ ಸ್ಪರ್ಧೆ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನೃತ್ಯ ಸ್ಪರ್ಧೆಯು ಶಿಕ್ಷಣದ ಮುಖ್ಯ ಅಂಗವಾಗಿದ್ದು, ಅದು ಹಲವಾರು ಕೌಶಲಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಕೊಡುತ್ತದೆ ಎಂದು ಅದಾನಿ ಪವರ್ ಕಾರ್ಪೋರೇಶನ್‌ನ ನಿರ್ದೇಶಕರು ಹಾಗೂ ಜಂಟಿ ಅಧ್ಯಕ್ಷರಾದ ಶ್ರೀ ಕಿಶೋರ್ ಆಳ್ವ ಹೇಳಿದರು.

ಅವರು ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಂತರ್ ಕಾಲೇಜು ಮಟ್ಟದ ನೃತ್ಯ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷರಾದ ಬಿ.ಎಮ್. ಸುಕುಮಾರ್ ಶೆಟ್ಟಿ ಮಾತನಾಡಿ ವಿದ್ಯೆಯು ಸಮಾಜದಲ್ಲಿ ನಮ್ಮನ್ನು ಗುರುತಿಸುವಂತೆ ಮಾಡುತ್ತದೆ. ವಿದ್ಯಾವಂತರಾಗಿ ಜೊತೆಗೆ ಸಾಂಸ್ಕೃತಿಕವಾಗಿ ಬೆಳೆದು ಬಂದ ಕಲೆಗಳಲ್ಲಿ ತೊಡಗಿಸಿಕೊಳ್ಳಿ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದೋಮ ಚಂದ್ರಶೇಖರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಣದ ಜೊತೆಗೆ ದೇಶದ ವಿವಿಧ ಸಂಸ್ಕೃತಿಯನ್ನು ಉಳಿಸುವುದು ಅಗತ್ಯವಾಗಿದೆ ಎಂದರು. ಈ ಸಂದರ್ಭದಲ್ಲಿ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿಗಳಾದ ಸೀತರಾಮ ನಕ್ಕತ್ತಾಯ, ಆಡಳಿತ ಮಂಡಳಿಯ ಸದಸ್ಯರಾದ ಅನಿಲ್ ಛಾತ್ರ, ಹಾಗೂ ವಿದ್ಯಾಥಿ ಕ್ಷೇಮಪಾಲನಾಧಿಕಾರಿ ಮಹೇಶ್ ಬಾಬು ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕರುಗಳಾದ ಸ್ಫೂರ್ತಿ ಎಸ್. ಫೆರ್ನಾಂಡಿಸ್ ಸ್ವಾಗತಿಸಿ, ರಾಜೇಶ್ ಶೆಟ್ಟಿ, ವಕ್ವಾಡಿ ವಂದಿಸಿದರು. ಅವಿತಾ ಕೊರಿಯಾ ಅತಿಥಿಗಳನ್ನು ಪರಿಚಯಿಸಿದರು. ವೀಣಾ ಭಟ್ ಕಾರ್ಯಕ್ರಮ ನಿರೂಪಿಸಿದರು.

Exit mobile version