Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಕಾಲೇಜು ವಿದ್ಯಾರ್ಥಿನಿಯೋರ್ವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ. ತಗ್ಗರ್ಸೆ ಮಳುವಾಡಿಮನೆ ಮಂಜುನಾಥ ಪೂಜಾರಿ ಎಂಬುವವರ ಪುತ್ರಿ, ಬೈಂದೂರು ಸರಕಾರಿ ಪದವಿ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಅಶ್ವಿನಿ (20) ಮೃತ ದುರ್ದೈವಿ.

ಮೃತ ಅಶ್ವಿನಿ ತಂದೆ ದುಬೈನಲ್ಲಿ ಉದ್ಯೋಗಿಯಾಗಿದ್ದು ಮನೆಯಲ್ಲಿ ತಾಯಿಯೊಂದಿಗೆ ವಾಸವಿದ್ದಳು. ಬುಧವಾರ ತಾಯಿ ತನ್ನ ಗಂಗೊಳ್ಳಿಗೆ ತೆರಳಿದ್ದ ಸಮಯದಲ್ಲಿ ಕಾಲೇಜಿಗೆ ತೆರಳುವುದಾಗಿ ಹೇಳಿದ್ದ ಆಕೆ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ.

ಡೆತ್‌ನೋಟ್‌ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಬೇರೆ ಯಾರು ಕಾರಣರಲ್ಲ, ಜೀವ ಹಾಗೂ ಜೀವನದಲ್ಲಿ ಜಿಗುಪ್ಸೆ ಬಂದು ಬದುಕಲಿಕ್ಕೆ ಇಷ್ಟವಿಲ್ಲದೆ ಸಾಯುವ ನಿರ್ದಾರ ಮಾಡಿದ್ದೇನೆ. ತಾನು ಹಾಕಿಕೊಂಡಿರುವ ಉಡುಗೆಯಲ್ಲಿಯೇ ನನ್ನ ಅಂತ್ಯಕ್ರಿಯೆ ನಡೆಸಬೇಕು ಎಂದು ಬರೆದುಕೊಂಡಿದ್ದಾಳೆ.ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಕೆ ಪ್ರಗತಿಯಲ್ಲಿದೆ.

Exit mobile version