Kundapra.com ಕುಂದಾಪ್ರ ಡಾಟ್ ಕಾಂ

ಶೈಕ್ಷಣಿಕ ಪ್ರಗತಿಯಿಂದ ಸಾಮಾಜೋದ್ಧಾರ ಆಗಬೇಕು: ಸಂತೋಷ್ ಶೆಟ್ಟಿ

?????????????

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಗರ, ಪಟ್ಟಣ ಮಕ್ಕಳಿಗೆ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಅನುಕೂಲವಿದ್ದರೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಬಂಟ ಸಮಾಜ ಯುವಕರು ಹಿರಿಯರ ಮಾರ್ಗದರ್ಶನಲ್ಲಿ ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆಗಳ ತೆರೆಯುವ ಮೂಲಕ ಎಲ್ಲರಿಗೂ ಉತ್ತಮ ಶಿಕ್ಷಣ ಸಿಗುವಂಣh ವ್ಯವಸ್ಥೆಗೆ ಮುಂದಾಗಬೇಕು. ಶೈಕ್ಷಣಿಕ ಪ್ರಗತಿಯಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಬೆಂಗಳೂರು ಬಂಟರ ಸಂಘ ಗೌರವ ಪ್ರಧಾನ ಕಾರ‍್ಯದರ್ಶಿ ಜಪ್ತಿ ಸಂತೋಷ ಶೆಟ್ಟಿ ಸಲಹೆ ಮಾಡಿದ್ದಾರೆ.

ಕುಂದಾಪುರ ತಾಲೂಕು ಯುವ ಬಂಟರ ಸಂಘ ಆಶ್ರಯದಲ್ಲಿ ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆದ ಬಂಟ್ಸ್ ಕ್ರಿಕೆಟ್ ಟ್ರೋಪಿ ಉದ್ಘಾಟಿಸಿ, ಮಾತನಾಡುತ್ತಿದ್ದರು.

ಬಾಂಬೆ ಹೊರತು ಹೊರತು ಪಡಿಸಿದರೆ ಬಂಟ ಸಮುದಾಯಕ್ಕೆ ಹೆಚ್ಚಿನ ರಾಜಕೀಯ ಪ್ರಧಾನ್ಯತೆ ಸಿಗುತ್ತಿಲ್ಲ. ಬಂಟ ಸಮುದಾಯದ ಹಿರಿಯರು ಯುವ ಬಂಟರನ್ನ ರಾಜಕೀಯದಲ್ಲಿ ಬೆಳಸುವ ಮೂಲಕ ರಾಜಕೀಯ ಪ್ರಧಾನತೆ ಸಿಗುವಂತೆ ಮಾರ್ಗದರ್ಶನ ನೀಡಬೇಕು ಎಂದು ಅವರು ಸಲಹೆ ಮಾಡಿದರು.

ಕುಂದಾಪುರ ತಾಲೂಕು ಯುವ ಬಂಟ ಸಂಘ ಅಧ್ಯಕ್ಷ ಸುಕೇಶ್ ಶೆಟ್ಟಿ ಹೊಸ್ಮಠ ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಮಂಗಳೂರು ಬಂಟರ ಯಾನೆ ನಾಡವರ ಮಾತೃಸಂಘ ಉಪಾಧ್ಯಕ್ಷ ಕೆಂಚನೂರು ಸೋಮಶೇಖರ ಶೆಟ್ಟಿ, ತಾಲೂಕ್ ಸಂಚಾಲಕ ಸಂಪಿಗೇಡಿ ಸಂಜೀವ ಶೆಟ್ಟಿ, ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರಿ ಅಧ್ಯಕ್ಷ ಕೆ.ವಿಕಾಸ್ ಹೆಗ್ಡೆ, ಉದ್ಯಮಿ ಸಬ್ಲಾಡಿ ಮಂಜಯ್ಯ ಶೆಟ್ಟಿ, ಕಾರ‍್ಯಕಾರಿ ಸಮಿತಿ ಸದಸ್ಯರಾದ ಬಿ.ಕರುಣಾಕರ ಶೆಟ್ಟಿ, ಕಟ್ಟಿನಮಕ್ಕಿ ಚಿತ್ತರಂಜನ್ ಹೆಗ್ಡೆ ಹರ್ಕೂರು, ಕೋಟೇಶ್ವರ ಸಹನಾ ಗ್ರೂಪ್ ಸುರೇಂದ್ರ ಶೆಟ್ಟಿ, ಬೆಂಗಳೂರು ಬಂಟರ ಸಂಘ ಜತೆ ಕಾರ‍್ಯದರ್ಶಿ ಕಾಂತಿ ಶೆಟ್ಟಿ, ಗೌರವಾಧ್ಯಕ್ಷ ಅಂಪಾರು ನಿತ್ಯಾನಂದ ಶೆಟ್ಟಿ, ಕೋಶಾಧಿಕಾರಿ ಮನೋರಾಜ್ ಶೆಟ್ಟಿ ಜಾಂಬೂರು, ಪ್ರಧಾನ ಕಾರ‍್ಯದರ್ಶಿ ಅವಿನಾಶ್ ರೈ, ಕ್ರೀಡಾ ಸಂಚಾಲಕ ರಾಜಾರಾಮ ಶೆಟ್ಟಿ ಹೈಕಾಡಿ, ಸಹ ಸಂಚಾಲಕ ಅರ್ಜುನ್ ಎಸ್.ಶೆಟ್ಟಿ ಇದ್ದರು. ಭಂಡಾರ್‌ಕಾರ‍್ಸ್ ಕಾಲೇಜ್ ವಿದ್ಯಾರ್ಥಿನಿ ಶರಣ್ಯ ಶೆಟ್ಟಿ ಮತ್ತು ಸಹನಾ ಶೆಟ್ಟಿ ಪ್ರಾರ್ಥಿಸಿದರು. ಅಕ್ಷಯ ಹೆಗ್ಡೆ ಹಾಗೂ ಸುನೀಲ್ ಕುಮಾರ್ ಶೆಟ್ಟಿ ನಿರೂಪಿಸಿದರು. ಅವಿನಾಶ್ ರೈ ವಂದಿಸಿದರು.

 

Exit mobile version