ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿಯ ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ೫೦೫ ಕಲಶಗಳ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ಭಾನುವಾರ ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು. ಹಿಂದು ಜಾಗರಣ ವೇದಿಕೆ ಗಂಗೊಳ್ಳಿ ಘಟಕದ ಅಧ್ಯಕ್ಷ ಗೋವಿಂದ್ರಾಯ ಶೇರುಗಾರ್, ಹಿಂಜಾವೇ ಉಡುಪಿ ಜಿಲ್ಲಾ ಸಹಸಂಚಾಲಕ ಟಿ.ವಾಸುದೇವ ದೇವಾಡಿಗ, ತಾಪಂ ಸದಸ್ಯ ಸುರೇಂದ್ರ ಖಾರ್ವಿ, ಗ್ರಾಪಂ ಸದಸ್ಯ ಲಕ್ಷ್ಮೀಕಾಂತ ಮಡಿವಾಳ, ಹಿಂದು ಪರ ಸಂಘಟನೆಗಳ ಕಾರ್ಯಕರ್ತರು, ಸೇವಾದಾರರು ಉಪಸ್ಥಿತರಿದ್ದರು.
ಗಂಗೊಳ್ಳಿ: 505 ಕಲಶಗಳ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಸಂಪನ್ನ

?
