ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಭ್ಯಾಸ ಮಾಡಿ ಯಾವುದೇ ಟ್ಯೂಶನ್ ತರಗತಿಗಳಿಗೆ ಹೋಗದೇ ತನ್ನದೇ ಆದ ಸ್ವಂತ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಗಂಗೊಳ್ಳಿಯ ಹೆಮ್ಮೆಯ ವಿದ್ಯಾರ್ಥಿನಿ ರಾಧಿಕಾ ಪೈ ಸಾಧನೆ ಶ್ಲಾಘನೀಯ. ಮುಂದೆಯೂ ಇಂತಹ ಸಾಧನೆಗಳನ್ನು ಮಾಡುವಂತಾಗಲಿ ಎಂದು ಕುಂದಾಪುರದ ವಕೀಲ, ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಹೇಳಿದರು.
ಅವರು ಗಂಗೊಳ್ಳಿಯಲ್ಲಿ ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿ ವತಿಯಿಂದ ಜರಗಿದ ಸರಳ ಸಮಾರಂಭದಲ್ಲಿ ಪಿಯುಸಿ ಪರೀಕ್ಷೆಯ ಟಾಪರ್ ರಾಧಿಕಾ ಪೈ ಅವರನ್ನು ಸನ್ಮಾನಿಸಿ ಗೌರವಿಸಿ ಮಾತನಾಡಿದರು.
ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿ ಅಧ್ಯಕ್ಷ ಭಾಸ್ಕರ ಖಾರ್ವಿ ಹಾಗೂ ಸಮಿತಿಯ ಹಿರಿಯ ಸದಸ್ಯ ರಾಮದಾಸ ಖಾರ್ವಿ ಶುಭ ಹಾರೈಸಿದರು. ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿ ಕಾರ್ಯದರ್ಶಿ ಜಯರಾಮ ದೇವಾಡಿಗ, ಕುಂದಾಪುರದ ವಕೀಲ ಹರ್ಷರಾಜ್, ಗಂಗೊಳ್ಳಿಯ ವಕೀಲ ಆನಂದ ಕೆ., ಎಂ.ಮಾಧವ ಪೈ, ಮಾಯಾ ಎಂ.ಪೈ ಹಾಗೂ ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

