Kundapra.com ಕುಂದಾಪ್ರ ಡಾಟ್ ಕಾಂ

ಮುಲ್ಲಿಬಾರು ಪ್ರಾಥಮಿಕ ಶಾಲೆ ಪ್ರಾರಂಭೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು : ಇಲ್ಲಿನ ಯಡ್ತರೆ ಗ್ರಾ.ಪಂ. ವ್ಯಾಪ್ತಿಯ ಹೊಸೂರಿನ ಮುಲ್ಲಿಬಾರು ಶಾಲೆಯಲ್ಲಿ ಶಾಲೆ ಪ್ರಾರಂಭೋತ್ಸವವನ್ನು ಆಚರಿಸಲಾಯಿತು.

ಶಾಲೆಗೆ ತಳಿರು ತೋರಣಗಳಿಂದ ಅಲಂಕರಿಸಿ, ವಿದ್ಯಾರ್ಥಿಗಳಿಗೆ ಹೊಸ ಪಠ್ಯಪುಸ್ತಕ ನೀಡಿ ಪಾಯಸದೂಟದೊಂದಿಗೆ ಆತ್ಮೀಯವಾಗಿ ಸ್ವಾಗತಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಸಕಲ ಸೌಲಭ್ಯವನ್ನು ಹೊಂದಿರುವ ಸರಕಾರಿ ಶಾಲೆಗೆ ಬರುವಂತೆ ಶಿಕ್ಷಕ ವೃಂದ ಹಾಗೂ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಚಂದ್ರ ಪೂಜಾರಿ ವಿನಂತಿಸಿಕೊಂಡರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಗಿರೀಶ್ ಪಿ. ಮೇಸ್ತ ಶಿಕ್ಷಕರಾದ ರಾಮನಾಥ ಮೇಸ್ತ, ಸುಧಾಕರ ಪಿ. ಬೈಂದೂರು, ಹಾಲೇಶಪ್ಪ ಡಿ. ಆರ್., ವಿನಾಯಕ ಪಟಗಾರ್ ಹಾಗೂ ರವೀಂದ್ರ ಮತ್ತು ಊರ ಮಹನೀಯರು ಉಪಸ್ಥಿತರಿದ್ದರು.

 

Exit mobile version