ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಗ್ರಾಮ ಪಂಚಾಯತಿನ ಸದಸ್ಯರು ಸಕ್ರೀಯರಾದಾಗ ಮಾತ್ರ ಗ್ರಾಮದ ಅಭಿವೃದ್ಧಿ ಕಾರ್ಯ ಚುರುಕುಗೊಳಿಸಲು ಸಾಧ್ಯವಾಗುತ್ತದೆ. ಈ ಬಾರಿ ಕ್ಷೇತ್ರದ ಶಾಸಕನಾಗಿ ಆಯ್ಕೆಯಾದ ಬಳಿಕ ಕ್ಷೇತ್ರದ ರಸ್ತೆ, ಸೇತುವೆ ನಿರ್ಮಾಣಕ್ಕೆ ಸಾಕಷ್ಟು ಅನುದಾನ ಒದಗಿಸಿ ಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ದ ತೃಪ್ತಿಯಿದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.
ಆರ್.ಐ.ಡಿ.ಎಫ್ -೧೭ ಯೋಜನೆಯಡಿ ಕೆ.ಆರ್.ಐ. ಡಿ.ಎಲ್ ಸಂಸ್ಥೆಯಿಂದ ನಿರ್ಮಿಸಿದ ಕೆರ್ಗಾಲ್ ಗ್ರಾಮ ಪಂಚಾಯಿತಿನ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಸರ್ಕಾರ ಮೀಸಲಾತಿ ಪದ್ದತಿ ಜಾರಿಗೊಳಿಸಿರುವುದರಿಂದ ಸಮಾಜದ ಕಟ್ಟಕಡೆಯ ವ್ಯಕ್ತಿ ಅಧಿಕಾರ ನಡೆಸುವಂತಾಗಿದೆ. ಗ್ರಾಮ ಪಂಚಾಯತ್ ಗ್ರಾಮಸ್ಥರ ಮನೆಯಾಗಿದ್ದು, ಗ್ರಾಮಸಭೆಯಲ್ಲಿ ಗ್ರಾಮದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಂಡಾಗ ಗ್ರಾಮದ ಅಭಿವೃದ್ದಿ ಸಾಧ್ಯ ಎಂದು ಹೇಳಿದರು.
ಗ್ರಾಪಂ ಅಧ್ಯಕ್ಷೆ ಸೋಮು ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯೆ ಗೌರಿ ದೇವಾಡಿಗ, ತಾಪಂ ಸದಸ್ಯರಾದ ಜಗದೀಶ ದೇವಾಡಿಗ, ತ್ರಾಸಿ ರಾಜು ದೇವಾಡಿಗ, ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಚನ್ನಪ್ಪ ಮೊಯಿಲಿ, ಕೆರ್ಗಾಲ್ ಕೋಟಿ ಚನ್ನಯ್ಯ ಗರಡಿಯ ಮೋಕ್ತೇಸರ ಚೆನ್ನು ಪೂಜಾರಿ, ಪಿಡಿಓ ಆನಂದ ಪೂಜಾರಿ ಉಪಸ್ಥಿತರಿದ್ದರು. ಕೆರ್ಗಾಲು ಗ್ರಾಪಂ ಉಪಾಧ್ಯಕ್ಷ ಸುಂದರ ಕೊಠಾರಿ ಸ್ವಾಗತಿಸಿ, ಶಿಕ್ಷಕ ವಿಶ್ವನಾಥ ಶೆಟ್ಟಿ ನಿರೂಪಿಸಿದರು.