Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಜನರು ಕಾಲಕಾಲಕ್ಕೆ ಕಣ್ಣಿನ ತಪಾಸಣೆಯನ್ನು ಮಾಡಿಕೊಳ್ಳುತ್ತಿರಬೇಕು. ಕಣ್ಣಿನ ಬಗ್ಗೆ ಅಸಡ್ಡೆ ತೋರದೆ ಕಣ್ಣಿನ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಕಣ್ಣಿನ ದೋಷದ ಬಗ್ಗೆ ಅಗತ್ಯ ಚಿಕಿತ್ಸೆ ಪಡೆದುಕೊಂಡು ಸ್ವಸ್ಥ ಸಮಾಜ ನಿರ್ಮಿಸಲು ಜನರು ಮುಂದಾಗಬೇಕು ಎಂದರು ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್ ಹೇಳಿದರು.

ಗಂಗೊಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿದ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ತಾಲೂಕು ಪಂಚಾಯತ್ ಸದಸ್ಯ ಸುರೇಂದ್ರ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೋಟ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಲಯನ್ಸ್ ಕಣ್ಣಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರೂಪಶ್ರೀ, ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ.ಜಿ.ರಾಘವೇಂದ್ರ ಭಂಡಾರ್‌ಕಾರ್, ಕಾರ್ಯದರ್ಶಿ ನಾರಾಯಣ ನಾಯ್ಕ್, ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಬಿ.ಸದಾನಂದ ಶೆಣೈ, ನಾಗಮ್ಮ ಮತ್ತಿತರರು ಉಪಸ್ಥಿತರಿದ್ದರು.

ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಪ್ರಜ್ವಲಾ ಸ್ವಾಗತಿಸಿದರು. ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಶ್ವೇತಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಅರ್ಪಿತಾ ವಂದಿಸಿದರು.
ಕೋಟ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಲಯನ್ಸ್ ಕಣ್ಣಿನ ಆಸ್ಪತ್ರೆ, ಲಯನ್ಸ್ ಟ್ರಸ್ಟ್ ಫ್ಹಾರ್ ಸರ್ವಿಸಸ್ ಎಂಡ್ ಚಾರಿಟೀಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಅಂಧತ್ವ ನಿವಾರಣಾ ವಿಭಾಗ ಉಡುಪಿ, ಲಯನ್ಸ್ ಮತ್ತು ಲಯನೆಸ್ ಕ್ಲಬ್ ಬ್ರಹ್ಮಾವರ ಬಾರ್ಕೂರು, ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.

Exit mobile version