ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟೇಶ್ವರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆಯಾಗಿದೆ. ಕೋಟೇಶ್ವರದ ಕಾಮತ್ ಪೆಟ್ರೋಲ್ ಬಂಕ್ ಬಳಿ ಬೆಳಿಗ್ಗೆ ಛಿದ್ರಗೊಂಡು ಗುರುತು ಹಿಡಿಯದ ಸ್ಥಿತಿಯಲ್ಲಿ ಬಿದ್ದಿದ್ದ ಶವವನ್ನು ಕಂಡ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.
ವ್ಯಕ್ತಿಯ ಕೈಯಲ್ಲಿದ್ದ ಕೆಂಪು ಬಣ್ಣದ ನೂಲು ಹೊರತು ಪಡಿಸಿ ಬೇರಾವುದೇ ಗುರುತು ಸಿಗದ ರೀತಿಯಲ್ಲಿ ಅಪಘಾತ ನಡೆದಿದೆ. ರಾತ್ರಿ ವೇಳೆ ಸಂದರ್ಭದಲ್ಲಿ ಯಾವುದೋ ವಾಹನ ಹರಿದು ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕುಂದಾಪುರದ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಗುರುತು ಪತ್ತೆಗೆ ಕೋರಿದ್ದಾರೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.