Site icon Kundapra.com ಕುಂದಾಪ್ರ ಡಾಟ್ ಕಾಂ

ಗುಜ್ಜಾಡಿ: ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

????????????????????????????????????

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಶಾಲೆಯ ಸಭಾಂಗಣದಲ್ಲಿ ಜರಗಿತು.

ದಾನಿಗಳಾದ ಪ್ರಕಾಶ ಎಂ.ಪೂಜಾರಿ ಮತ್ತು ಅರುಣ ಬುತ್ತೆಲ್ಲೊ ಅವರು ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಮೂಲಕ ಕೊಡ ಮಾಡಿದ ಪುಸ್ತಕಗಳನ್ನು ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ವಿತರಿಸಿದ ಪ್ರಕಾಶ ಎಂ.ಪೂಜಾರಿ ಮತ್ತು ಅರುಣ ಬುತ್ತೆಲ್ಲೊ ಶುಭ ಹಾರೈಸಿದರು. ತಾಲೂಕು ಪಂಚಾಯತ್ ಸದಸ್ಯ ನಾರಾಯಣ ಕೆ.ಗುಜ್ಜಾಡಿ, ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ ಮೇಸ್ತ, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಶ್ರೀಧರ ಮೇಸ್ತ, ಶಾಲೆಯ ಮುಖ್ಯೋಪಾಧ್ಯಾಯ ಜಯರಾಮ ಶೆಟ್ಟಿ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರಾಮನಾಥ ಚಿತ್ತಾಲ್, ಶಿಕ್ಷಕಿ ಪವಿತ್ರ ಮೇಸ್ತ, ಸಂಘದ ಕಾರ್ಯದರ್ಶಿ ರಾಘವೇಂದ್ರ ಡಿ., ಸದಸ್ಯ ಸುಧಾಕರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Exit mobile version