ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ನೃತ್ಯ ವಸಂತ ನಾಟ್ಯಾಲಯದ ವಿದ್ಯಾರ್ಥಿನಿ ಬಿ. ಯುಕ್ತಿ ಉಡುಪ ಅವರು ಗೋಪೀನಾಥದಾಸ ನ್ಯಾಸ’ ನೃತ್ಯ ಮತ್ತು ಸಂಗೀತ ಸಂಸ್ಥೆ ಬೆಂಗಳೂರು ಮತ್ತು ಕನ್ನಡ ಮತ್ತು ಸಂಸ್ಕೃತ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದೊಂದಿಗೆ ಬೆಂಗಳೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ.
ಯುಕ್ತಿ ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ತರಗತಿಯಲ್ಲಿ ಓದುತ್ತಿದ್ದು, ನೃತ್ಯ ವಸಂತ ನಾಟ್ಯಾಲಯ ಕುಂದಾಪುರದ ವಿದೂಷಿ ಪ್ರವಿತಾ ಅಶೋಕ್ ಅವರ ಶಿಷ್ಯೆ.