Site icon Kundapra.com ಕುಂದಾಪ್ರ ಡಾಟ್ ಕಾಂ

ಗುರುಕುಲ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಹಿಂದಿ ಬಾಲರತ್ನ ಪುರಸ್ಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ವಕ್ವಾಡಿ: ಗುರುಕುಲ ಶಿಕ್ಷಣ ಸಂಸ್ಥೆಯಲ್ಲಿ ೨೦೧೬-೧೭ ನೇ ಸಾಲಿನಲ್ಲಿ ಅಖಿಲ ಭಾರತೀಯ ರಾಷ್ಟ್ರಭಾಷಾ ವಿಕಾಸ ಸಮಿತಿಯು ಆಯೋಜಿಸಿದ ರಾಷ್ಟ್ರ ಮಟ್ಟದ ಹಿಂದಿ ಪರೀಕ್ಷೆಯಲ್ಲಿ ಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ತನ್ಮಯ ಶೆಟ್ಟಿ, ಅಬ್ದುಲ್ ಸಲಾಂ, ರಕ್ಷಣ್ ಕುಂದಾಪುರ ಮತ್ತು ಸಮಿತಾ ಅವರುಗಳು ಹಿಂದಿ ಶಿಕ್ಷಕ ವಿಜಯಕುಮಾರ್ ಅವರ ಮಾರ್ಗದರ್ಶನದಲ್ಲಿ ಪರೀಕ್ಷೆ ಬರೆದು ಬಾಲರತ್ನ ಪುರಸ್ಕಾರಕ್ಕೆ ಭಾಜನರಾಗುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯ ಮುಖ್ಯಸ್ಥರು ಅಭಿನಂದಿಸಿರುತ್ತಾರೆ.

Exit mobile version