Kundapra.com ಕುಂದಾಪ್ರ ಡಾಟ್ ಕಾಂ

ಸಂಘ ಸಂಸ್ಥೆಗಳು ಸಿದ್ಧಾಂತಕ್ಕೆ ಬದ್ಧರಾಗಿ, ಕಾಲಕ್ಕೆ ಅನುಗುಣವಾಗಿ ನಡೆದರೆ ಶ್ರೇಯಸ್ಸು: ಭಾಸ್ಕರ್ ಖಾರ್ವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಸಂಘ ಸಂಸ್ಥೆಗಳು ಮೂಲ ಸಿದ್ಧಾಂತಕ್ಕೆ ಬದ್ಧರಾಗಿದ್ದುಕೊಂಡು ಕಾಲಕ್ಕೆ ಅನುಗುಣವಾಗಿ ತನ್ನ ಕಾರ‍್ಯ ಚಟುವಟಿಕೆಗಳಲ್ಲಿ ಅಗತ್ಯ ಮಾರ್ಪಾಡುಗಳನ್ನು ಮಾಡಿಕೊಂಡು ಸಾಗಬೇಕು. ಹಾಗಾದಾಗ ಸಂಸ್ಥೆ ಬೇಳೆಯಲು ಸಾಧ್ಯ ಎಂದು ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಭಾಸ್ಕರ್ ಖಾರ್ವಿ ಅಭಿಪ್ರಾಯಪಟ್ಟರು.

ಅವರು ಇಲ್ಲಿನ ಶಾರದಾ ಮಂಟಪದಲ್ಲಿ ನಡೆದ ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿ (ರಿ) ಯ ಎರಡನೇ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದರು. ಈ ಸಭೆಯಲ್ಲಿ ಸಮಿತಿಯ ಕಳೆದ ವರುಷದ ಆಯವ್ಯಯ ಪಟ್ಟಿಯನ್ನು ಮಂಡಿಸಲಾಯಿತು.

ಮುಂದಿನ ಎರಡು ವರುಷಗಳ ಅವಧಿಗೆ ನೂತನ ಪದಾಧಿಕಾರಿಗಳನ್ನು ಈ ಸಂದರ್ಭದಲ್ಲಿ ನೇಮಿಸಲಾಯಿತು. ಅಧ್ಯಕ್ಷರಾಗಿ ಭಾಸ್ಕರ್ ಖಾರ್ವಿ ಅವಿರೋಧವಾಗಿ ಮರುಆಯ್ಕೆಯಾದರು.ಸಮಿತಿ ಉಪಾಧ್ಯಕ್ಷರಾಗಿ ರಾಮಚಂದ್ರ ಖಾರ್ವಿ, ಪ್ರಧಾನ ಕಾರ‍್ಯದರ್ಶಿಯಾಗಿ ಜಯರಾಮ ದೇವಾಡಿಗ, ಕೋಶಾಧಿಕಾರಿಯಾಗಿ ರಾಘವೇಂದ್ರ ದೇವಾಡಿಗ ಎಸ್, ಕಾರ‍್ಯದರ್ಶಿಯಾಗಿ ಗುರುರಾಜ್ ದೇವಾಡಿಗ, ಜೊತೆ ಕಾರ‍್ಯದರ್ಶಿಯಾಗಿ ಸಂತೋಷ ಖಾರ್ವಿ, ಜೊತೆ ಕೋಶಾಧಿಕಾರಿಯಾಗಿ ಜಗದೀಶ ಖಾರ್ವಿ, ಸಾಂಸ್ಕೃತಿಕ ಕಾರ‍್ಯದರ್ಶಿಯಾಗಿ ಸತೀಶ್ ಖಾರ್ವಿ , ಕ್ರೀಡಾ ಕಾರ‍್ಯದರ್ಶಿಯಾಗಿ ಲಕ್ಷ್ಮಣ ಡಿ ಆಯ್ಕೆಯಾದರು.

ಸಮಿತಿಯ ಗೌರವಾಧ್ಯಕ್ಷರಾದ ಬನ್ನಾಡಿ ಸೋಮನಾಥ ಹೆಗ್ಡೆ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ರಾಮದಾಸ ಖಾರ್ವಿ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ವೆಂಕಟೇಶ ಖಾರ್ವಿ, ನರೇಂದ್ರ ಎಸ್ ಗಂಗೊಳ್ಳಿ ಮೊದಲಾದವರು ಉಪಸ್ಥಿತರಿದ್ದರು. ಜಯರಾಮ ದೇವಾಡಿಗ ಕಾರ‍್ಯಕ್ರಮ ನಿರ್ವಹಿಸಿದರು. ರಾಘವೇಂದ್ರ ದೇವಾಡಿಗ ವಂದಿಸಿದರು.

 

Exit mobile version