Kundapra.com ಕುಂದಾಪ್ರ ಡಾಟ್ ಕಾಂ

ಪ್ರತಿಷ್ಟಿತ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿಗೆ ಪತ್ರಕರ್ತ ರವಿ ಬೆಳಗೆರೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬ್ರಹ್ಮಾವರ: ಪತ್ರಿಕೋಧ್ಯಮ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆಗೈದ ಖ್ಯಾತ ಪತ್ರಕರ್ತ ಮುಂಗಾರು ಪತ್ರಿಕೆಯ ಸಂಪಾದಕ ದಿ. ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಹೆಸರಿನಲ್ಲಿ ಬ್ರಹ್ಮಾವರ ಪ್ರೆಸ್ ಕ್ಲಬ್ ವತಿಯಿಂದ ಕೊಡಮಾಡುವ ಪ್ರತಿಷ್ಟಿತ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋಧ್ಯಮ ಪ್ರಶಸ್ತಿಗೆ ಈ ಬಾರಿ ಪತ್ರಿಕೋಧ್ಯಮ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿದ ಹಾಯ್ ಬೆಂಗಳೂರ್ ಪತ್ರಿಕೆಯ ಸಂಪಾದಕ, ಖ್ಯಾತ ಬರಹಗಾರ ರವಿಬೆಳಗೆರೆ ಅವರನ್ನು ಆಯ್ಕೆ ಮಾಡಲಾಗಿದೆ.

ಬ್ರಹ್ಮಾವರ ಪ್ರೆಸ್‌ಕ್ಲಬ್ ಕಳೆದ ವರ್ಷದಿಂದ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದ್ದು, ಕಳೆದ ಬಾರಿ ಸುವರ್ಣ ನ್ಯೂಸ್‌ನ ಕವರ್ ಸ್ಟೋರಿ ಖ್ಯಾತಿಯ ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರು ಪ್ರಶಸ್ತಿ ಪಡೆದಿದ್ದರು. ಜುಲೈ ೨೩ ರಂದು ಬ್ರಹ್ಮಾವರದ ಬಂಟರ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಕನಾರ್ಟಕ ಲೋಕಾಯುಕ್ತರಾದ ವಿಶ್ವನಾಥ್ ಶೆಟ್ಟಿ, ಆರೋಗ್ಯ ಸಚಿವ ರಮೇಶ್ ಕುಮಾರ್, ಸಚಿವ ಪ್ರಮೋದ್ ಮಧ್ವರಾಜ್ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿರುವರು ಹಾಗೂ ಕಾರ್ಯಕ್ರಮದ ಆರಂಭದಲ್ಲಿ ಪತ್ರಿಕೋದ್ಯಮದ ಕುರಿತು ಸಂವಾದ ಕಾರ್ಯಾಗಾರ ನಡೆಯಲಿದೆ ಎಂದು ಬ್ರಹ್ಮಾವರ ಪ್ರೆಸ್ ಕ್ಲಬ್‌ನ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Exit mobile version