ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇತ್ತೀಚೆಗೆ ಕಾಲೇಜಿನ ಪತ್ರಿಕೋದ್ಯಮ ವಿಭಾಗದಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ವಿಜಯಕರ್ನಾಟಕ ಪತ್ರಿಕೆಯ ಕುಂದಾಪುರದ ಯುವ ಪತ್ರಕರ್ತೆ ಅಶ್ವಿನಿ ಹಕ್ಲಾಡಿ ಅವರು ಪತ್ರಿಕೋದ್ಯಮದಲ್ಲಿ ಮಹಿಳೆಯರ ಸವಾಲುಗಳು ಎಂಬ ವಿಷಯದ ಕುರಿತು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನವಿಕ ಸಂಘದ ಸಂಯೋಜಕರಾದ ಪ್ರೊ. ರಾಮಚಂದ್ರ ಅವರು ವಹಿಸಿದ್ದರು. ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಸುಮಲತಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಶಬರಿ ಕಾರ್ಯಕ್ರಮ ನಿರೂಪಿಸಿ, ಅನಿತಾ ವಂದಿಸಿದರು.’