Kundapra.com ಕುಂದಾಪ್ರ ಡಾಟ್ ಕಾಂ

ಗುರುಕುಲ ಪಬ್ಲಿಕ್ ಶಾಲೆಯಲ್ಲಿ ಇಂಗ್ಲೀಷ್ ಲ್ಯಾಂಗ್ವೆಜ್ ಲ್ಯಾಬ್ ಪ್ರಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವ್ಯಕ್ತಿಯ ವಿಚಾರಗಳು, ಭಾವನೆ ಮತ್ತು ಜ್ಞಾನವನ್ನು ಹೊರಹಾಕಲು ಪ್ರಮುಖ ಮಾಧ್ಯಮ ಭಾಷೆಯಾಗಿರುತ್ತದೆ. ವ್ಯಕ್ತಿಯ ವ್ಯಕ್ತಿತ್ವದ ಸಂಪೂರ್ಣ ವಿಕಾಸಕ್ಕೆ ಭಾಷೆಯು ವಿಶಿಷ್ಟವಾದ ಪಾತ್ರ ನಿರ್ವಹಿಸುತ್ತದೆ.ವಿದ್ಯಾರ್ಥಿಗಳಲ್ಲಿ ಕಲಿಕೆಯು ಪರಿಣಾಮಕಾರಿಯಾಗಿ ನಿರ್ವಹಿಸಲು ಭಾಷಾ ಕೌಶಲ್ಯ ಅತೀ ಅವಶ್ಯಕವಾಗಿರುತ್ತದೆ. ಕೇಳುವ, ಮಾತನಾಡುವ, ಓದುವ ಮತ್ತು ಬರೆಯುವ ಕೌಶಲ್ಯಗಳು ವಿಶಿಷ್ಟವಾದ ಕಾರ್ಯನಿರ್ವಹಿಸುತ್ತದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಭಾಷೆ ಎಂದು ಮನ್ನಣೆಗೆ ಪಾತ್ರವಾದ ಇಂಗ್ಲೀಷ್‌ನ ಸ್ಪಷ್ಟ ಜ್ಞಾನ ಮತ್ತು ಬಳಕೆ ಎಲ್ಲರನ್ನು ಗುರುತಿಸುವಂತೆ ಮಾಡುತ್ತದೆ. ಇಂಗ್ಲೀಷ್ ಭಾಷೆಯಲ್ಲಿ ಪರಿಣಾಮಕಾರಿಯಾಗಿ ಕೇಳುವ, ಬರೆಯುವ, ಓದುವ ಮತ್ತು ಮಾತನಾಡುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ವಿದ್ಯಾಸಂಸ್ಥೆಗಳ ಕರ್ತವ್ಯವಾಗಿರುತ್ತದೆ.

ಈ ನಿಟ್ಟಿನಲ್ಲಿ ಗುರುಕುಲ ಪಬ್ಲಿಕ್ ಶಾಲೆಯು ಪ್ರಮುಖ ಹೆಜ್ಜೆಯನ್ನು ಇಟ್ಟಿದೆಯೆಂದರೆ ತಪ್ಪಾಗಲಾರದು. ಪ್ರತಿಷ್ಠಿತ ವರ್ಡ್ಸ್‌ವರ್ತ್ ಇಂಗ್ಲೀಷ್ ಲ್ಯಾಂಗ್ವೇಜ್ ಲ್ಯಾಬ್ ನ ಸಹಕಾರದೊಂದಿಗೆ ಸಂಸ್ಥೆಯು ಡಿಜಿಟಲ್ ಇಂಗ್ಲೀಷ್ ಲ್ಯಾಬ್‌ನ್ನು ರಂದು ಪ್ರಾರಂಭಿಸಲಾಯಿತು. ಸಂಸ್ಥೆಯ ಇಂಗ್ಲೀಷ್ ಶಿಕ್ಷಕರುಗಳಿಗೆ ನಿರಂತರ ಎರಡು ದಿನಗಳ ಕಾಲ ತರಬೇತಿಯನ್ನು ನೀಡಿದರಲ್ಲದೇ, ವಿದ್ಯಾರ್ಥಿಗಳು ಹೇಗೆ ಇದರ ಸಂಪೂರ್ಣ ಪ್ರಯೋಜನ ಪಡೆಯಬಹುದು ಎನ್ನುವುದರ ಬಗ್ಗೆ ಮಾಹಿತಿ ನೀಡಲಾಯಿತು. ಈ ಸೌಲಭ್ಯವನ್ನು ಒದಗಿಸಿದ ಸಂಸ್ಥೆಯ ಜಂಟಿ ಕಾರ್ಯನಿರ್ವಾಹಕರುಗಳಿಗೆ ಮತ್ತು ಪ್ರಾಂಶುಪಾಲರಿಗೆ ಗುರುಕುಲ ಶಿಕ್ಷಕವೃಂದ ಧನ್ಯವಾದ ಸಲ್ಲಿಸಿದ್ದಲ್ಲದೇ ಇದರ ಸಂಪೂರ್ಣ ಪ್ರಯೋಜನವನ್ನು ಕಲಿಕಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಮನ ಮುಟ್ಟುವಂತೆ ನಿರ್ವಹಿಸಲಾಗುವುದು ಎಂದು ಭರವಸೆ ನೀಡಿದರು. ಈ ಇಂಗ್ಲೀಷ್ ಲ್ಯಾಬ್ ನಲ್ಲಿ ೧ನೇ ತರಗತಿಯಿಂದ ೧೦ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಅಲ್ಲದೇ ಅದರ ಪೂರ್ಣಪ್ರಮಾಣದ ಪ್ರಯೋಜನ ಪಡೆಯಲಿದ್ದಾರೆ ಎಂದು ವರ್ಡ್ಸ್‌ವರ್ತ್ ಇಂಗ್ಲೀಷ್ ಲ್ಯಾಂಗ್ವೇಜ್ ಲ್ಯಾಬ್ ನ ಸಂಪನ್ಮೂಲ ವ್ಯಕ್ತಿಯಾದ ಶ್ರೀ.ನಾಗೇಶ್ವರನ್ ನುಡಿದರು.

Exit mobile version