Kundapra.com ಕುಂದಾಪ್ರ ಡಾಟ್ ಕಾಂ

ಮೊಗವೀರ ಯುವ ಸಂಘಟನೆ ಹೆಮ್ಮಾಡಿದ ಘಟಕ ಪದಗ್ರಹಣ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮೊಗವೀರ ಯುವ ಸಂಘಟನೆಗಳು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಬೇಕು. ಕ್ರಿಯಶೀಲವಾಗಿ ಸಮಾಜದಲ್ಲಿ ತೊಡಗಿಸಿಕೊಂಡಾಗ ಸಮಾಜದ ಗೌರವವು ಸಂಘಟನೆಗೆ ದೊರಕಿ ಸಂಘಟನೆ ಇನ್ನಷ್ಟು ಬಲಿಷ್ಠವಾಗಲು ಸಾಧ್ಯ. ಹಾಗಾಗಿ ಯುವ ಸಂಘಟನೆಯಲ್ಲಿ ಸೇವಾ ಮನೋಭಾವ ಇರಬೇಕು ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕರಾದ ನಾಡೋಜ ಡಾ|ಜಿ.ಶಂಕರ್ ಹೇಳಿದರು.

ಬಗ್ವಾಡಿಯ ಶ್ರೀ ಮಹಿಷಾಸುರ ಸಭಾಭವನದಲ್ಲಿ ನಡೆದ ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಮೊಗವೀರ ಸಮಾಜದ ಹಿರಿಯ ಮುಖಂಡ ಗುಜ್ಜಾಡಿ ಮಂಜು ನಾಯ್ಕ್, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಅಧ್ಯಕ್ಷರಾದ ಕೆ.ಕೆ.ಕಾಂಚನ್ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಅಧ್ಯಕ್ಷ ವಾಸು ಜಿ.ನಾಯ್ಕ್ ವಂಡ್ಸೆ, ಸಂಘಟನೆಯನ್ನು ಇನ್ನಷ್ಟು ಬಲವರ್ಧನೆಗೊಳಿಸಲು ಶ್ರಮಿಸಬೇಕು. ನನ್ನ ಅಧ್ಯಕ್ಷ ಅವಧಿಯಲ್ಲಿ ಸಹಕಾರ ನೀಡಿದ ಎಲ್ಲರನ್ನು ಕೃತಜ್ಞತೆಯಿಂದ ಅಭಿನಂದಿಸುತ್ತೇನೆ ಎಂದರು.

ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ರಿ., ಅಧ್ಯಕ್ಷರಾದ ಗಣೇಶ ಕಾಂಚನ್ ನೂತನ ಪದಾಧಿಕಾರಿಗಳಿಗೆ ಪದಪ್ರದಾನ ನೆರವೇರಿಸಿದರು. ಜಿ.ಪಂ.ಸದಸ್ಯ ಶೋಭಾ ಜಿ.ಪುತ್ರನ್, ಮಾಜಿ ಜಿ.ಪಂ.ಸದಸ್ಯ ಗಣಪತಿ ಟಿ.ಶ್ರೀಯಾನ್, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕಾರ್ಯದರ್ಶಿ ಸುರೇಶ ವಿಠಲವಾಡಿ, ಯುವ ಸಂಘಟನೆಯ ಗೌರವಾಧ್ಯಕ್ಷ ಆನಂದ ಮೊಗವೀರ ಉಪಸ್ಥಿತರಿದ್ದರು.

ನೂತನ ಅಧ್ಯಕ್ಷರಾದ ಮಂಜುನಾಥ ಎನ್.ಚಂದನ್ ನೆಂಪು, ನೂತನ ಕಾರ್ಯದರ್ಶಿ ಲೋಹಿತಾಶ್ವ ಆರ್.ಕುಂದರ್ ಬಾಳಿಕೆರೆ ಹಾಗೂ ನೂತನ ಪದಾಧಿಕಾರಿಗಳು ಪದಗ್ರಹಣ ಸ್ವೀಕರಿಸಿದರು. ಯುವ ಸಂಘಟನೆಯ ಸ್ಥಾಪಕ ಅಧ್ಯಕ್ಷ ಉದಯಕುಮಾರ್ ಹಟ್ಟಿಯಂಗಡಿ ಸ್ವಾಗತಿಸಿ, ನೂತನ ಕಾರ್ಯದರ್ಶಿ ಲೋಹಿತಾಶ್ವ ಆರ್.ಕುಂದರ್ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಪ್ರಭಾಕರ ಎನ್.ಎಂ.ಸೇನಾಪುರ ವಂದಿಸಿದರು. ಬೆಳಿಗ್ಗೆಯಿಂದ ಮಹಿಷಾಮರ್ದಿನಿಯ ಸನ್ನಿಧಿಯಲ್ಲಿ ಚಂಡಿಕಾ ಹೋಮ ನಡೆಯಿತು. ಮುಂಬಯಿ ಉದ್ಯಮಿ ಗೋಪಾಲ ಪುತ್ರನ್ ಸೇವೆಯಾಗಿ ಅನ್ನಸಂತರ್ಪಣೆ ನಡೆಯಿತು.

Exit mobile version