Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಮಾನಸಿಕ ಅಸ್ವಸ್ಥತೆಯಿಂದ ನೊಂದು ಮಹಿಳೆ ಆತ್ಮಹತ್ಯೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಬಂಕೇಶ್ವರದ ಮಹಾಕಾಳಿ ಲೇಔಟ್ ನಿವಾಸಿ ಬೈಂದೂರಿನ ರೋಶನ್ ಹೋಮಿಯೋ ಕ್ಲಿನಿಕ್‌ನ ವೈದ್ಯ ಡಾ. ರೋಶನ್ ಪಾಯಸ್ ಇವರ ಪತ್ನಿ ಶಾಂತಿ ಪಾಯಸ್ (40) ಗುರುವಾರ ಬೆಳಗಿನ ಜಾವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕಳೆದ ಒಂದು ತಿಂಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು ಕಳೆದ ನಾಲ್ಕು ದಿನಗಳಿಂದ ರಾತ್ರಿ ಸರಿಯಾಗಿ ನಿದ್ದೆಯನ್ನು ಮಡುತ್ತಿರಲಿಲ್ಲ ಎಂದು ತಿಳಿದುಬಂದಿದೆ. ಗುರುವಾರ ಬೆಳಿಗ್ಗೆ ಇದ್ದಕ್ಕಿಂದಂತೆ ನಾಪತ್ತೆಯಾಗಿದ್ದು, ಹುಡುಕಾಟ ಮಾಡುವಾಗ ಮನೆಯ ಬಾವಿಯಲ್ಲಿ ಶಾಂತಿ ಪಾಯಸ್ ಶವ ದೊರೆತಿದೆ. ಕೆಲವು ದಿನಗಳ ಹಿಂದೆ ಕುಂದಾಪುರದ ಮಾನಸಿಕ ತಜ್ಞರಿಂದ ಚಿಕಿತ್ಸೆ ಪಡೆದಿದ್ದರು. ಮೃತರು ಪತಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version