ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೆ ವಿದ್ಯಾರ್ಥಿಗಳ ಸಂಘ ರಚನೆ ಮತ್ತು ಉದ್ಘಾಟನಾ ಸಮಾರಂಭ ಇತ್ತಿಚಿಗೆ ಶಾಲೆಯಲ್ಲಿ ನಡೆಯಿತು. ಹಳೆ ವಿದ್ಯಾರ್ಥಿಗಳ ಸಂಘದ ನೂತನ ಅಧ್ಯಕ್ಷರಾಗಿ ವಿಶ್ವನಾಥ ಉಡುಪ, ಕಾರ್ಯದರ್ಶಿಯಾಗಿ ಕೆ. ವಿ. ಶಾಜಿ ಆಯ್ಕೆಯಾಗಿದ್ದಾರೆ. ಚಂದ್ರ ಬಳೆಗಾರ ಸಹಕಾರ್ಯದರ್ಶಿಯಾಗಿ, ಪವನ ಗಾಣಿಗ ಖಜಾಂಜಿಯಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಕೊಲ್ಲೂರು ಗ್ರಾಮ ಪಂಚಾಯತ್ ಕೊಲ್ಲೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ನೇತ್ರಾವತಿ ಆಚಾರ್ಯ, ಮಾಜಿ ಅಧ್ಯಕ್ಷ ಕೆ.ಎನ್ ವಿಶ್ವನಾಥ ಅಡಿಗ, ಸದಸ್ಯರಾದ ಎಸ್.ಕುಮಾರ್, ಪ್ರೇಮ, ಎಸ್‌ಡಿಎಂಸಿ ಕೆ.ಎನ್ ಚಂದ್ರ ಶೇಖರ್ ಅಡಿಗ, ಉಪಾಧ್ಯಕ್ಷೆ ಹೇಮಾವತಿ, ಸದಸ್ಯರು ಮತ್ತು ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.