Kundapra.com ಕುಂದಾಪ್ರ ಡಾಟ್ ಕಾಂ

ಕಾವ್ಯ ಆತ್ಮಹತ್ಯೆ ಪ್ರಕರಣ: ಸಂಸ್ಥೆ ಯಾವುದೇ ತನಿಖೆಗೆ ಸಿದ್ಧ. ಸಮಾಜದಲ್ಲಿ ಗೊಂದಲ ಸೃಷ್ಠಿಸಬೇಡಿ: ಡಾ. ಎಂ ಮೋಹನ ಆಳ್ವ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ವ್ಯವಸ್ಥೆಯು ಅತ್ಯಂತ ಪಾರದರ್ಶಕವಾಗಿ ನಡೆಯುತ್ತಿದ್ದು, ಕಾವ್ಯ ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ವಿನಃ ಕಾರಣ ಸಂಸ್ಥೆಯನ್ನು ಟಾರ್ಗೆಟ್ ಮಾಡಲಾಗುತ್ತಿದೆ. ನಮ್ಮ ಸಂಸ್ಥೆಯಲ್ಲಿ ಕೊಲೆ ಪ್ರಕರಣ ಹಿಂದೆ ಎಂದಿಗೂ ನಡೆದಿಲ್ಲ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ, ಮಾಧ್ಯಮ ಅಥವಾ ವೈಯಕ್ತಿಕವಾಗಿ ಯಾರೇ ತನಿಖೆ ಮುಂದಾದರೂ ಯಾವುದೇ ತನಿಖೆ ನಾವು ಸಿದ್ಧರಿದ್ದೇವೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಪ್ರತಿಕ್ರಿಯಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ.

ಜುಲೈ 20ರಂದು ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಕಾವ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಡುತ್ತಿರುವ ವದಂತಿಗಳಿಗೆ ಅವರು ಪ್ರತಿಕ್ರಿಯಿಸಿದ್ದಾರೆ. ಯಾವುದೇ ಅಪರಾಧ ನಡೆದರೆ ಅದು ಪೊಲೀಸ್ ತನಿಖೆಯಾಗಬೇಕು. ಆದರೆ ಸಮಾಜದಲ್ಲಿ ಗೊಂದಲ ಸೃಷ್ಠಿಸಿ, ಜವಾಬ್ದಾರಿಯು ಸ್ಥಾನದಲ್ಲಿರುವ ನನ್ನನು ಹಾಗೂ ಕಳೆದ ಎರಡುವರೆ ದಶಕಗಳಿಂದ ಪಾರದರ್ಶಕವಾಗಿ ಶಿಕ್ಷಣ ನೀಡುತ್ತಿರುವ ಆಳ್ವಾಸ್ ಸಂಸ್ಥೆಯನ್ನು ಟಾರ್ಗೆಟ್ ಮಾಡುವುದರ ಮೂಲಕ ನಮಗೆ ಮಾನಸಿಕ ಹಿಂಸೆ ನೀಡುತ್ತಿರುವುದು ಸರಿಯಲ್ಲ. ಸಂಸ್ಥೆಯಲ್ಲಿ ಕಲಿಯುತ್ತಿರುವ 26 ಸಾವಿರ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ನಮ್ಮನ್ನೇ ನಂಬಿದ್ದಾರೆ. ಕಾವ್ಯ ಆತ್ಮಹತ್ಯೆ ಪ್ರಕರಣವು ಸರಿಯಾದ ರೀತಿಯಲ್ಲಿ ತನಿಖೆಯಾಗಿ ಅತೀ ಶೀಘ್ರ ಸತ್ಯಾಂಶ ಹೊರಬರಲಿ ಎಂದು ಡಾ.ಎಂ ಮೋಹನ್ ಆಳ್ವ ತಿಳಿಸಿದ್ದಾರೆ.

 

Exit mobile version