Kundapra.com ಕುಂದಾಪ್ರ ಡಾಟ್ ಕಾಂ

ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಪಡೆಯನ್ನು ಸಿದ್ಧಗೊಳಿಸಿ: ಎಐಸಿಸಿ ವೀಕ್ಷಕ ಪಿ.ಸಿ ವಿಷ್ಣುನಾದನ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಪ್ರತಿ ಬೂತ್ ಮಟ್ಟದಲ್ಲಿಯೂ ಕಾಂಗ್ರೆಸ್ ಕಾರ್ಯಪಡೆಯನ್ನು ಸಿದ್ಧಗೊಳಿಸಿ ರಾಜ್ಯ ಸರಕಾರದ ಜನಪರ ಯೋಜನೆಗಳನ್ನು ನಾಗರಿಕರಿಗೆ ಮನವರಿಕೆ ಮಾಡಿಕೊಡುವಲ್ಲಿ ಶ್ರಮಿಸಬೇಕಿದೆ. ರಾಜ್ಯದ ಜನರಿಗೆ ವಿವಿಧ ಭಾಗ್ಯಗಳು ಹಾಗೂ ರೈತರ ಸಾಲಮನ್ನಾದಂತಹ ಅತ್ಯುತ್ತಮ ಕಾರ್ಯಕ್ರಮಗಳನ್ನು ಜಾರಿಗೆ ತಂದಿರುವ ಸರಕಾರದ ಸಾಧನೆಯನ್ನು ನೇರವಾಗಿ ಜನರ ಮುಂದಿಡುವ ಕೆಲಸವಾಗಬೇಕಿದ್ದು ಪಕ್ಷದ ಕಾರ್ಯಕರ್ತರು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕಿದೆ ಎಂದು ಎಐಸಿಸಿ ವೀಕ್ಷಕ ಪಿ.ಸಿ ವಿಷ್ಣುನಾದನ್ ಕರೆ ನೀಡಿದರು.

ಅವರು ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ನಡೆದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಹಾಗೂ ವಿವಿಧ ಘಟಕಗಳ ಪದಪ್ರಧಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕೇಂದ್ರದಲ್ಲಿ ನರೇಂದ್ರ ಮೋದಿ ಸರಕಾರ ಆಡಳಿತಕ್ಕೆ ಬಂದಾಗಿನಿಂದಲೂ ಸುಳ್ಳಿನ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತಿದ್ದಾರೆ. ಅವರು ಆಡಳಿತಕ್ಕೆ ಬರುವ ಮೊದಲು ನೀಡಿದ ಭರವಸೆಗಳನ್ನು ಈಡೇರಿಸದೇ ಮೂರು ವರ್ಷ ಕಳೆದಿದ್ದಾರೆ. ಆದರೆ ರಾಜ್ಯ ಕಾಂಗ್ರೆಸ್ ಸರಕಾರ ಪ್ರನಾಳಿಕೆಯಲ್ಲಿ ತಿಳಿಸಿದ್ದ ಶೇ.೯೫ರಷ್ಟು ಭರವಸೆಗಳನ್ನು ಈಡೇರಿಸಿದೆ. ರಾಜ್ಯ ಸರಕಾರದ ಯೋಜನೆಗಳನ್ನು ಮುಂದಿಟ್ಟುಕೊಂಡು ಕಾರ್ಯಕರ್ತರು ಜನರಿಗೆ ಮನವರಿಗೆ ಮಾಡಬೇಕಿದೆ. ಜನರು ಮುಂದಿನದ್ದನ್ನು ನಿರ್ಧರಿಸುತ್ತಾರೆ ಎಂದರು. ಕುಂದಾಪ್ರ ಡಾಟ್ ಕಾಂ.

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡುರಾವ್ ಅವರು ಮಾತನಾಡಿ ಬಿಜೆಪಿಗೆ ಸುಳ್ಳು ಹೇಳಿ ಜನರ ಮನಸ್ಸು ಗೆಲ್ಲುವ ಕಲೆ ಸಿದ್ಧಿಸಿದೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಅಂತಹ ಸ್ಥಿತಿಯಿಲ್ಲ. ರಾಜ್ಯ ಸರಕಾರದ ಯೋಜನೆಗಳನ್ನು ಇಟ್ಟುಕೊಂಡು ಸತ್ಯವನ್ನು ಹೇಳಿ ಜನರ ಮನಸ್ಸನ್ನು ಗೆಲ್ಲುವ ಕೆಲಸ ಮಾಡೋಣ. ಬಿಜೆಪಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ, ಪಿತೂರಿ ಹೆಣೆಯುವ ತಂತ್ರವನ್ನು ಹೆಣೆಯುತ್ತಾ ಕಾನೂನು ಸುವ್ಯವಸ್ಥೆ ಹಾಳು ಮಾಡುವ ಕೆಲಸವನ್ನು ಮಾಡುತ್ತಿದೆ. ಆದರೆ ಕಾರ್ಯಕರ್ತರು ಇದರಿಂದ ವಿಚಲಿತರಾಗದ ತಕ್ಕ ಉತ್ತರ ನೀಡಬೇಕಿದೆ. ಕರ್ನಾಟಕದ ಚುನಾವಣೆ ದೇಶದ ರಾಜಕೀಯ ವ್ಯವಸ್ಥೆಯನ್ನು ಬದಲಿಸುವ ದಿಕ್ಸೂಚಿ ಚುನಾವಣೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೈಂದೂರು ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಅವರು ಪ್ರಾಸ್ತಾವಿಕ ಮಾತನಾಡಿ ರಾಜ್ಯ ಕಾಂಗ್ರೆಸ್ ಸರಕಾರದಿಂಗಾಗಿ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗಿದೆ. ಕ್ಷೇತ್ರದ ಅಭಿವೃದ್ಧಿಗಾಗಿ ಸತತವಾಗಿ ಶ್ರಮಿಸಲಾಗುತ್ತಿದ್ದು ಪಕ್ಷದ ಕಾರ್ಯಕರ್ತರು ಕ್ಷೇತ್ರದಲ್ಲಾದ ಕೆಲಸಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುವುದರೊಂದಿಗೆ ಮತ್ತೆ ಪಕ್ಷವನ್ನು ಅಧಿಕಾರವನ್ನು ತರುವಲ್ಲಿ ನಮ್ಮೊಂದಿಗೆ ಶ್ರಮಿಸಬೇಕಿದೆ ಎಂದರು.  ಕುಂದಾಪ್ರ ಡಾಟ್ ಕಾಂ ಸುದ್ದಿ.

ಈ ಸಂದರ್ಭ ವಂಡ್ಸೆ ಬ್ಲಾಕ್ ಹಿಂದೂಳಿದ ವರ್ಗಗಳ ವಿಭಾಗ ಅಧ್ಯಕ್ಷ ಚಂದ್ರ ನಾಯ್ಕ್, ಕಿಸಾನ್ ಘಟಕ ಅಧ್ಯಕ್ಷ ನಾಗಪ್ಪ ಕೊಠಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಲಿತಾ ಶ್ರೀನಿವಾಸ ಗಾಣಿಗ, ಕಾರ್ಮಿಕ ಘಟಕ ಅಧ್ಯಕ್ಷ ಮುತ್ತಯ್ಯ ಪೂಜಾರಿ, ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ, ಕಾರ್ಮಿಕ ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ಶೆಟ್ಟಿ, ಪರಿಶಿಷ್ಟ ಜಾತಿ ಘಟಕ ಅಧ್ಯಕ್ಷ ಜಗದೀಶ್, ಬೈಂದೂರು ಅಲ್ಪಸಂತ್ಯಾತ ಘಟಕದ ಕಾರ್ಯಾಧ್ಯಕ್ಷ ಜೋಯ್ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡುರಾವ್ ಪದಪ್ರದಾನ ನೆರವೇರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ ಗಪೂರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಆರ್. ಸಭಾಪತಿ, ಕಾರ್ಯದರ್ಶಿ ವೆರೋನಿಕಾ ಕರ್ನೇಲಿಯೋ, ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಗೌರಿ ದೇವಾಡಿಗ, ಜ್ಯೋತಿ ಎಂ. ತಾಪಂ ಸದಸ್ಯ ಜಗದೀಶ ದೇವಾಡಿಗ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮುನಿಯಾಲು ಉದಯಕುಮಾರ್ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಐಟಿ ಸೆಲ್ ಅಧ್ಯಕ್ಷ ವಿಶ್ವಾಸ್ ಶೆಟ್ಟಿ ವಿವಿಧ ಘಟಕಗಳ ಪ್ರಮುಖರು ಉಪಸ್ಥಿತರಿದ್ದರು. ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಪಗೇಡಿ ಸಂಜೀವ ಶೆಟ್ಟಿ ಸ್ವಾಗತಿಸಿದರು. ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನಕುಮಾರ್ ಉಪ್ಪುಂದ ವಂದಿಸಿದರು.

  

Exit mobile version