ಕುಂದಾಪ್ರ ಡಾಟ್ ಕಾಂ ಸುದ್ದಿ.
ಬ್ಯೆಂದೂರು: ಬಿಲ್ಲವ ಸಮಾಜ ಸೇವಾ ಸಂಘ ರಿ. ಯಡ್ತರೆ ಬ್ಯೆಂದೂರು ಇದರ ೨೦೧೭ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ. ದೊಟ್ಟಯ್ಯ ಪೂಜಾರಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಸಸಿಹಿತ್ಲು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ವೃತ್ತಿಯಲ್ಲಿ ಛಾಯಾಗ್ರಾಹಕರಾಗಿರುವ ದೊಟ್ಟಯ ಪೂಜಾರಿ ಅವರು ವಿವಿಧ ಸಂಘ ಸಂಸ್ಥೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿರುವ ಕಿಶೋರ್ ಪೂಜಾರಿ ಅವರೂ ಕೂಡ ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದು, ಉತ್ತಮ ಕಬ್ಬಡ್ಡಿ ಪಟುವಾಗಿಯೂ
ಗುರುತಿಸಿಕೊಂಡಿದ್ದಾರೆ.