ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸ್ನೇಹಿತರೊಂದಿಗೆ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಲವಲವಿಕೆಯಿಂದ ಭಾಗಿಯಾಗಿದ್ದ ವಿದ್ಯಾರ್ಥಿಯೊರ್ವ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ನಡೆದಿದೆ. ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿ, ಜಡ್ಡಿನಕುದ್ರು ನಿವಾಸಿ ಅಮಿತ್ (18) ಮೃತ ದುರ್ದೈವಿ.
ಬೆಳಿಗ್ಗೆ ಎಂದಿನಂತೆ ಕಾಲೇಜಿಗೆ ಬಂದಿದ್ದ ಅಮಿತ್ ಧ್ವಜಾರೋಹಣ ಮುಗಿದ ಬಳಿಕ ಸಭಾಂಗಣದಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ವೀಕ್ಷಿಸುತ್ತಿದ್ದ ವೇಳೆ ಹಠಾತ್ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿಯೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಕುಂದಾಪ್ರ ಡಾಟ್ ಕಾಂ .
ಮುಂಬೈಯಲ್ಲಿ ಉದ್ಯೋಗಿಯಾಗಿರುವ ಹಟ್ಟಿಕುದ್ರುವಿನ ಆನಂದ ಪೂಜಾರಿ ಹಾಗೂ ಸುಗಂಧಿ ದಂಪತಿಗಳ ಮೂವರು ಮಕ್ಕಳಲ್ಲಿ ಹಿರಿಯವರಾದ ಅಮಿತ್‌ಗೆ ಈ ಹಿಂದಿಯೂ ಹೃದಯ ಸಂಬಂಧಿ ಸಮಸ್ಯೆಯಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರೆನ್ನಲಾಗಿದೆ. ಅಕಾಲಿಕವಾಗಿ ಮರಣವನ್ನಪ್ಪಿದ್ದ ಅಮಿತ್‌ಗೆ ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷರಾದ ಬಿ.ಎಂ ಸುಕುಮಾರ್ ಶೆಟ್ಟಿ, ಪ್ರಾಂಶುಪಾಲರು ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.