ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಭಾರತೀಯ ಜನತಾ ಪಕ್ಷವನ್ನು ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಮಹತ್ತರವಾದ ಜವಾಬ್ದಾರಿ ಬಿಜೆಪಿಯ ಕಾರ್ಯಕರ್ತರಿಗಿದ್ದು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕಿದೆ. ಬಿಜೆಪಿಯ ವಿವಿಧ ಮೋರ್ಚಾಗಳು ಸಂಘಟನಾತ್ಮವಾಗಿ ಕಾರ್ಯನಿರ್ವಹಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಬೇಕಿದೆ ಎಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಬಿ. ಎಂ. ಸುಕುಮಾರ್ ಶೆಟ್ಟಿ ಹೇಳಿದರು.
ವಂಡ್ಸೆಯಲ್ಲಿ ನಡೆದ ಬೈಂದೂರು ವಿಧಾನಸಭಾ ಕ್ಷೇತ್ರದ ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಪಂದನ, ಕೋಟಿ ವೃಕ್ಷ ಅಭಿಯಾನ ಹಾಗೂ ಕಾರ್ಯಕರ್ತರ ಸಭೆಯನ್ನದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಬಡವರು ಹಾಗೂ ದುರ್ಬಲ ವರ್ಗದವರನ್ನು ಮರೆತಿದೆ. ಈ ನಿಟ್ಟಿನಲ್ಲಿ ಪ್ರತಿ ಬೂತ್ ಮಟ್ಟದಲ್ಲಿಯೂ ಬಿಜೆಪಿಯ ಕಾರ್ಯಕರ್ತರು ಸಂಘಟಿತ ಹೋರಾಟ ನಡೆಸುವ ಮೂಲಕ ರಾಜ್ಯದಲ್ಲಿ ಮತ್ತೆ ಬಿ. ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವಂತೆ ಕಾಯೋನ್ಮಕವಾಗಬೇಕಿದೆ ಎಂದರು.
ಕ್ಷೇತ್ರಾಧ್ಯಕ್ಷ ಉಪ್ಪಿನಕುದ್ರು ಸದಾನಂದ ಅಧ್ಯಕ್ಷತೆವಹಿಸಿದ್ದರು. ಬಿಜೆಪಿ ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಗೋಪಾಲ ಕಾಂಚನ್, ನಿರ್ಮಲಾ ಶೆಟ್ಟಿ, ಜಿಪಂ ಸದಸ್ಯ ಕೆ. ಬಾಬು ಶೆಟ್ಟಿ, ತಾಪಂ ಸದಸ್ಯ ಕರಣ್ ಕುಮಾರ್ ಪೂಜಾರಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಭಟ್, ದೀಪಕ್‌ಕುಮಾರ್ ಶೆಟ್ಟಿ, ಉಪಾಧ್ಯಕ್ಷ ಕಳಿ ಚಂದ್ರಯ್ಯ ಆಚಾರ್ಯ, ಶಕ್ತಿಕೇಂದ್ರದ ಅಧ್ಯಕ್ಷ ರಾಮಚಂದ್ರ ಮಂಜ, ಗ್ರಾಮ ಸಮಿತಿ ಅಧ್ಯಕ್ಷ ವಿ. ಕೆ. ಶಿವರಾಮ ಶೆಟ್ಟಿ, ಚಿತ್ತೂರು ಗ್ರಾಮ ಸಮಿತಿ ಅಧ್ಯಕ್ಷ ರವಿರಾಜ್ ಶೆಟ್ಟಿ, ಪಕ್ಷದ ಮುಖಂಡರಾದ ಡಾ. ಅತುಲ್ ಕುಮಾರ್ ಶೆಟ್ಟಿ, ಕೊಳ್ತಾ ಗೋಪಾಲ ಶೆಟ್ಟಿ, ರಾಘವೇಂದ್ರ ನೆಂಪು, ಗೀತಾ ರಾಜು, ನಿತ್ಯಾನಂದ ಶೆಟ್ಟಿ, ಉಮೇಶ ನಾಯ್ಕ್, ಮಹೇಶ ಗಾಣಿಗ ಅಬ್ಬಿ, ಪ್ರಭಾಕರ ಗಾಣಿಗ, ಚಂದ್ರ ಗಾಣಿಗ ವಂಡ್ಸೆ, ರವಿ ಗಾಣಿಗ ಕೆಂಚನೂರ್, ಶರತ್ ಬಿಲ್ಲಾ ವಂಡ್ಸೆ, ಪ್ರಕಾಶ ಪೂಜಾರಿ ಜೆಡ್ಡು, ಮಂಜುನಾಥ ದೇವಾಡಿಗ ವಂಡ್ಸೆ, ಸುಧಾಕರ ಪೂಜಾರಿ, ಮನೋಹರ್ ಶೆಟ್ಟಿ, ಸುಧಾಕರ ಮೊಗವೀರ, ಸಂತೋಷ್ ಗಾಣಿಗ, ಮುತಾಲಿ ಸಾಹೇಬ್, ಸಂದೇಶ ಶೆಟ್ಟಿ ಅಡಿಕೆಕೊಡ್ಲು ಉಪಸ್ಥಿತರಿದ್ದರು.
ಈ ಸಂದರ್ಭ ನಿವೃತ್ತ ಯೋಧ ವಿಜು ಥೋಮಸ್ ಇವರನ್ನು ಗ್ರಾಮ ಸಮಿತಿ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಅನಾರೋಗ್ಯದಿಂದ ಬಳಲುತ್ತಿರುವ ಶಂಕರ ಆಚಾರ್ಯರಿಗೆ ಆರ್ಥಿಕ ಸಹಾಯ ನೀಡಲಾಯಿತು.