ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇತಿಹಾಸ ಪ್ರಸಿದ್ದ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕ್ಷೇತ್ರಕ್ಕೆ ಆಗಮಿಸಿದ ಸಚಿವರನ್ನು ದೇವಳದ ಆಡಳಿತ ಧರ್ಮದರ್ಶಿ ಹೆಚ್.ರಾಮಚಂದ್ರ ಭಟ್ ಸ್ವಾಗತಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ದೇವಳದ ಪ್ರದಾನ ಅರ್ಚಕ ಬಾಲಚಂದ್ರ ಭಟ್, ಬಿಜೆಪಿ ಮುಖಂಡ ಸುಕುಮಾರ್ ಶೆಟ್ಟಿ, ಉದ್ಯಮಿ ಅಶೋಕ ರೈ ಮಂಗಳೂರು, ಬಿಜೆಪಿ ಬೈಂದೂರು ಕ್ಷೇತ್ರಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಹಟ್ಟಿಯಂಗಡಿ ಗ್ರಾ. ಪಂ. ಅಧ್ಯಕ್ಷ ರಾಜೀವ ಶೆಟ್ಟಿ, ಕರುಣಾ ಪೂಜಾರಿ ಇನ್ನಿತರರು ಉಪಸ್ಥಿತರಿದ್ದರು.